ಕರ್ನಾಟಕ

karnataka

ETV Bharat / state

ಸಭಾಪತಿ ಸ್ಥಾನಕ್ಕೆ ಮೇ 18ರಂದು ರಾಜೀನಾಮೆ ನೀಡುವೆ: ಬಸವರಾಜ ಹೊರಟ್ಟಿ

'ಮೇ 18ಕ್ಕೆ ನಾನು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ. ಆ ನಂತರವೇ ಭಾರತೀಯ ಜನತಾ ಪಕ್ಷದ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡುವೆ' ಎಂದು ಧಾರವಾಡದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ

By

Published : May 13, 2022, 8:54 AM IST

ಧಾರವಾಡ: ಮೋಹನ ಲಿಂಬಿಕಾಯಿ ಬಿಜೆಪಿ ಅಭ್ಯರ್ಥಿ ಆಗಿರುವ‌ ವಿಚಾರ ನನಗೆ ಗೊತ್ತಿಲ್ಲ. ನಾನು ಮೇ 18 ಕ್ಕೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 11ಕ್ಕೆ ರಾಜೀನಾಮೆ ಕೊಡಬೇಕಿತ್ತು. ಆದರೆ, ಚುನಾವಣಾ ನೋಟಿಫಿಕೇಶನ್‌ ಬರದಿದ್ದ ಕಾರಣ ನೀಡಿರಲಿಲ್ಲ ಎಂದರು.

ಸತತ 7 ಬಾರಿ ವಿಧಾನ ಪರಿಷತ್​​ಗೆ ಆಯ್ಕೆಯಾಗಿ ಸೋಲಿಲ್ಲದ ಸರದಾರನಾಗಿರುವ ಜೆಡಿಎಸ್​​ನ ಹಿರಿಯ ನಾಯಕ ಹೊರಟ್ಟಿ ನಿನ್ನೆ ಆರ್.ಟಿ.ನಗರದಲ್ಲಿರುವ ಸಿಎಂ ಖಾಸಗಿ ನಿವಾಸಕ್ಕೆ ಭೇಟಿ ನೀಡಿ, ಬೊಮ್ಮಾಯಿ ಜೊತೆ ಮುಂದಿನ ರಾಜಕೀಯ ನಡೆಯ ಬಗ್ಗೆ ಸಮಾಲೋಚಿಸಿದರು.


ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಬಿಜೆಪಿ ಸೇರುವ ಕುರಿತು ತಿಳಿಸಿದ್ದರು. ಹಾವೇರಿ, ಧಾರವಾಡ, ಗದಗ, ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅಮಿತ್ ಶಾ ಒಪ್ಪಿಗೆ ನೀಡಿದ್ದು, ಹೊರಟ್ಟಿ ಅವರನ್ನು ಬಿಜೆಪಿಗೆ ಬರಮಾಡಿಕೊಳ್ಳಲಾಗಿತ್ತು.

ಇದನ್ನೂ ಓದಿ:ಸಿಎಂ ಭೇಟಿಯಾದ ಬಸವರಾಜ ಹೊರಟ್ಟಿ: ಪಕ್ಷ ಸೇರ್ಪಡೆ ದಿನಾಂಕ ನಿಗದಿ ಕುರಿತು ಸಮಾಲೋಚನೆ

ABOUT THE AUTHOR

...view details