ಧಾರವಾಡ:ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ ಅ.14 ರಂದು ಮಹಿಳೆಯೊಬ್ಬಳನ್ನು ಹತ್ಯೆಗೈದ ಆರೋಪದಲ್ಲಿ ಜೈಲು ಸೇರಿದ್ದ ಆರೋಪಿ ಆನಂದ ದುಧನಿ ಆತ್ಮಹತ್ಯೆಗೆ ಶರಣಾದ ವಿಚಾರಾಧೀನ ಕೈದಿಯಾಗಿದ್ದಾನೆ. ಜೈಲಿನಲ್ಲಿದ್ದ ಬೆಡ್ಶೀಟ್ ಹರಿದು ಅದರಿಂದ ನೇಣು ಹಾಕಿಕೊಂಡಿದ್ದಾನೆ ಎಂದು ಹೇಳಲಾಗಿದೆ.
ಧಾರವಾಡ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ - ಆತ ಜೈಲಿನಲ್ಲಿಯೇ ಆತ್ಮಹತ್ಯೆ
ಧಾರವಾಡದ ಜಿಲ್ಲಾಸ್ಪತ್ರೆ ಎದುರು ಸವಿತಾ ಕಿತ್ತೂರು ಎನ್ನುವ ಮಹಿಳೆಯನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಆರೋಪಿ ಆನಂದನನ್ನು ಕಳೆದ ಎರಡು ದಿನಗಳ ಹಿಂದೆಯಷ್ಟೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಈಗ ಆತ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
iInmate committed suiciden Dharwad Jail
ಧಾರವಾಡದ ಜಿಲ್ಲಾಸ್ಪತ್ರೆ ಎದುರು ಸವಿತಾ ಕಿತ್ತೂರು ಎನ್ನುವ ಮಹಿಳೆಯನ್ನು ಹತ್ಯೆ ಮಾಡಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಆರೋಪಿ ಆನಂದನನ್ನು ಕಳೆದ ಎರಡು ದಿನಗಳ ಹಿಂದೆಯಷ್ಟೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಈಗ ಆತ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಪೋಕ್ಸೊ ಕಾಯ್ದೆಯಡಿ ಬಂಧಿತ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ