ಹುಬ್ಬಳ್ಳಿ:ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ನಿವೇಶನಗಳ ವಿನ್ಯಾಸವನ್ನು ತೆರವುಗೊಳಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.
ಅವಳಿನಗರದಲ್ಲಿ ಅನಧಿಕೃತವಾಗಿ ನಿರ್ಮಿಸಲಾದ ನಿವೇಶನಗಳ ತೆರವು.. - dharvad
ಹುಬ್ಬಳ್ಳಿ-ಧಾರವಾಡದಲ್ಲಿ ಪ್ರಾಧಿಕಾರದ ನಿಯಮದ ವಿರುದ್ದವಾಗಿ ಅನಧಿಕೃತವಾಗಿ ನಿರ್ಮಿಸಲಾದ ನಿವೇಶನಗಳನ್ನು ತೆರವುಗೊಳಿಸಿ ಕ್ರಮ ಕೈಗೊಳ್ಳಲಾಗುತ್ತಿದೆ.
hd
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಅಧಿನಿಯಮ 1987ಕಲಂ 33ರ ಪ್ರಕಾರ ಜಮೀನನ್ನು ಪರಿವರ್ತನೆಗೊಳಿಸದೆ ನಿವೇಶನ ಅಭಿವೃದ್ಧಿ ಕಾರ್ಯ ಕೈಗೊಂಡು ಗಬ್ಬೂರಿನ ಜಮೀನು ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು.
ಪ್ರಾಧಿಕಾರದ ನಿಯಮದ ವಿರುದ್ದವಾಗಿ ಗ್ರಾಮದ ರಿ.ಸ.ನಂ.84, 86/1, 86/2 ಹಾಗೂ 96/3ರ ಕೃಷಿ ಜಮೀನಿನಲ್ಲಿ ಅಳವಡಿಸಲಾದ ಕಲ್ಲುಗಳನ್ನು ತೆರವುಗೊಳಿಸಲಾಗಿದೆ ಎಂದು ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.