ಧಾರವಾಡ: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪಾಪು ಧಾರೆ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಧಾರವಾಡ: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ರಕ್ಷ ಣಾ ವೇದಿಕೆ ಸ್ವಾಭಿಮಾನಿ ಬಣದ ಅಧ್ಯಕ್ಷ ಪಾಪು ಧಾರೆ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಕರ್ನಾಟಕದ ಸ್ಥಳೀಯ ಜನರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಮೀಸಲಾತಿಗಾಗಿ ಬಹಳ ವರ್ಷದಿಂದ ಕನ್ನಡಿಗರು ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ಮೀಸಲಾತಿ ಕಾನೂನು ಜಾರಿಗೆ ತರಲು ಇಚ್ಚಾಶಕ್ತಿ ತೋರದ ಪರಿಣಾಮ ರಾಜ್ಯದಲ್ಲಿ ಕನ್ನಡಿಗರಿಗೆ ಸಿಗಬೇಕಾದ ಉದ್ಯೋಗಗಳು ಬೇರೆ ರಾಜ್ಯದವರ ಪಾಲಾಗಿವೆ ಎಂದು ದೂರಿದರು.
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ದೀಪಾ ಚೋಳನ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.