ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಚಿಕ್ಕೋಡಿ ಬಿಜೆಪಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆಯಲ್ಲಿ ಬೆಳಗಾವಿಯ 3 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ : ಅಣ್ಣಾಸಾಹೇಬ್ ಜೊಲ್ಲೆ - ಉಪ ಚುನಾವಣೆ ಘೋಷಣೆಯಾದ ರಾಜ್ಯದ 15 ಕ್ಷೇತ್ರಗಳು
ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾಣೆ ಘೋಷಣೆಯಾಗುತ್ತಿದ್ದಂತೆ, ಬಿಜೆಪಿಯಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಲೆಕ್ಕಾಚಾರ ಆರಂಭವಾಗಿದೆ.
ಅಣ್ಣಾಸಾಹೇಬ್ ಜೊಲ್ಲೆ
15 ಕ್ಷೇತ್ರಗಳಲ್ಲಿ ಉಪ ಚುನಾವಣೆ ಘೋಷಣೆ ಹಿನ್ನೆಲೆ ಮಾತನಾಡಿದ ಅವರು, ನಮ್ಮಲ್ಲಿ ಚುನಾವಣೆ ಬಂದಾಗ ಮಾತ್ರ ಪೂರ್ವಸಿದ್ಧತಾ ಕಾರ್ಯ ನಡೆಯುವುದಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೆ ನಾವು ಚುನಾವಣೆ ತಯಾರಿ ನಡೆಸಿದ್ದೇವೆ ಎಂದರು.ಮೈತ್ರಿ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಲೇ ನಾವು ಚುನಾವಣೆಗೆ ರೆಡಿಯಾಗಿದ್ದೇವೆ. ನಮ್ಮ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ನಾವು ಬದ್ಧರಾಗಿ ಶ್ರಮಿಸುತ್ತೇವೆ ಎಂದರು.