ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ವೇದಾಂತ ಹಾಸ್ಪಿಟಲ್ ಲೋಕಾರ್ಪಣೆ ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಪ್ರಸಾದ ಅಬ್ಬಯ್ಯ ಉದ್ಘಾಟಿಸಿದರು.
ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಿಲ್ಲರ್ ಕೊರೊನಾ ವೈರಸ್ ಧಾರವಾಡ ಜಿಲ್ಲೆಯಲ್ಲಿ ತಲ್ಲಣ ಸೃಷ್ಟಿಸಿದೆ. ಅಲ್ಲದೇ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಡ್ ಕೊರತೆ ಹೆಚ್ಚಾಗಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ವೇದಾಂತ ಸಂಸ್ಥೆ ಸಹಭಾಗಿತ್ವದಲ್ಲಿ ಹಾಗೂ ಪ್ರಾಯೋಜಕತ್ವದಲ್ಲಿ ನೂರು ಬೆಡ್ ಆಸ್ಪತ್ರೆಯನ್ನು ಕಿಮ್ಸ್ ಆವರಣದಲ್ಲಿ ಸ್ಥಾಪನೆ ಮಾಡಲಾಗಿದೆ. ಇದಕ್ಕೆ ಕಾರಣಿಭೂತರಾದ ವೇದಾಂತ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.