ಹುಬ್ಬಳ್ಳಿ:ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ವಿಶೇಷ ಪ್ಯಾಕೇಜ್ನಲ್ಲಿ ಸ್ಟಾರ್ಟ್ ಅಪ್ಗಳಿಗೆ ಪ್ರೋತ್ಸಾಹ ನೀಡಿ ಹೊಸ ಆವಿಷ್ಕಾರವನ್ನು ಮಾಡಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಲಾಕ್ಡೌನ್ ಅವಶ್ಯಕತೆ ಇಲ್ಲ. ಆದರೆ ಜುಲೈ 7ರ ನಂತರದ ನಿರ್ಧಾರ ಸರ್ಕಾರ ಕೈಗೊಳ್ಳುತ್ತದೆ ಎಂದು ಹೇಳಿದರು.
ಸ್ಟಾರ್ಟ್ ಅಪ್ ಕ್ಷೇತ್ರಕ್ಕೆ ಪ್ರೋತ್ಸಾಹ: ಸಚಿವ ಜಗದೀಶ್ ಶೆಟ್ಟರ್ ಸ್ಟಾರ್ಟ್ ಅಪ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಬೆಂಗಳೂರಿನಲ್ಲಿಯೇ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಏನೆಲ್ಲಾ ಸೌಲಭ್ಯಗಳು ಬೇಕೋ ಅದನ್ನು ಸರ್ಕಾರ ನೀಡುತ್ತಿದೆ ಎಂದು ಹೇಳಿದರು.
ಈ ವೇಳೆ ಸುಮಾರು ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಬೆಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ಡೈರೆಕ್ಟರ್ ಆಗಿ ವರ್ಗಾವಣೆಗೊಂಡಿರುವ ಐಎಎಸ್ ಅಧಿಕಾರಿ ದೀಪಾ ಚೋಳನ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.