ಹುಬ್ಬಳ್ಳಿ:75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಒಂದು ಧ್ವಜಕ್ಕೆ 20 ರೂ. ಕೊಟ್ಟು ಸಾರ್ವಜನಿಕರು ಖರೀದಿ ಮಾಡಬೇಕು. ಆಗಸ್ಟ್ 13ರಿಂದ 15ರವರೆಗೆ ಧ್ವಜವನ್ನು ಮನೆಗಳ ಮೇಲೆ ಹಾರಿಸಬಹುದು. ನ್ಯಾಯಬೆಲೆ ಅಂಗಡಿ, ಮಾಲ್, ಮಹಾನಗರ ಪಾಲಿಕೆಗೆ ಸಂಬಂಧಪಟ್ಟ ಕಚೇರಿಗಳಲ್ಲಿ ಧ್ವಜಗಳು ದೊರೆಯುತ್ತವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ನಮಗೆ ಹತ್ತು ಕೋಟಿ ಧ್ವಜ ಬೇಕು. ಅದನ್ನು ಪೂರೈಕೆ ಮಾಡೋಕೆ ಆಗೋದಿಲ್ಲ. ಖಾದಿ ಧ್ವಜಕ್ಕೆ ಹೆಚ್ಚು ದುಡ್ಡು ಕೊಡಬೇಕು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದರಿಂದ ಧ್ವಜದ ಸಂಹಿತೆಗೆ ತಿದ್ದುಪಡಿ ತರಲಾಗಿದೆ ಎಂದರು.