ಕರ್ನಾಟಕ

karnataka

ETV Bharat / state

ಪ್ರವಾಹದ ಎಫೆಕ್ಟ್​: ಹುಬ್ಬಳ್ಳಿ-ಧಾರವಾಡದಲ್ಲಿ 73ನೇ ಸ್ವಾತಂತ್ರ್ಯೋತ್ಸವ ಸರಳ ಆಚರಣೆ - ಮಹಾನಗರ ಪಾಲಿಕೆ

ಪ್ರವಾಹದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸರಳವಾಗಿ 73ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಸ್ವಾತಂತ್ರೋತ್ಸವ ಆಚರಣೆ

By

Published : Aug 15, 2019, 12:17 PM IST

ಧಾರವಾಡ:ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾನಿಯಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸರಳವಾಗಿ 73ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

73ನೇ ಸ್ವಾತಂತ್ರ್ಯೋತ್ಸವ ಆಚರಣೆ

ನಗರದ ಆರ್.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿಜಿಲ್ಲಾಧಿಕಾರಿ ದೀಪಾ ಚೋಳನ್​ ಧ್ವಜಾರೋಹಣ ನೇರವೇರಿಸಿದ್ರು. ಇನ್ನು ನಗರದ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಜಿಲ್ಲಾಧಿಕಾರಿ ದೀಪಾ ಚೋಳನ್​ ಗೌರವ ವಂದನೆ ಸ್ವೀಕರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದರು.

ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರ್ ಎಂ.ಎನ್ ನಾಗರಾಜ್, ಧಾರವಾಡ ಎಸ್.ಪಿ‌ ಜಿ. ಸಂಗೀತ ಸೇರಿದಂತೆ ಹಲವು ಅಧಿಕಾರಿಗಳು ಭಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಿಂದ 73 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಈ ವೇಳೆ ಪಾಲಿಕೆಯ ಆಯುಕ್ತ ಡಾ.ಸುರೇಶ ಹಿಟ್ನಾಳ್​ ಇಲ್ಲಿನ ಈದ್ಗಾ ಮೈದಾನ ಮತ್ತು ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಜೆಡಿಎಸ್ ಮುಖಂಡ ಬಸವರಾಜ್​ ಹೊರಟ್ಟಿ, ಪ್ರದೀಪ ಶೆಟ್ಟರ್, ಶ್ರೀನಿವಾಸ್​ ಮಾನೆ, ಉಪ ತಹಶಿಲ್ದಾರ್​ ಪ್ರಕಾಶ್​ ನಾಶಿ ಹಾಗೂ ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

ABOUT THE AUTHOR

...view details