ಹುಬ್ಬಳ್ಳಿ: ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕಿಂತ ಹೆಚ್ಚು ದೇವಾಂಗ ಸಮುದಾಯದ ಜನರು ವಾಸಿಸುತ್ತಿದ್ದು, ಈ ಸಮುದಾಯದ ಜನರು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಹೀಗಾಗಿ ಸರ್ಕಾರ ಎಲ್ಲರಂತೆ ನಮ್ಮ ಸಮುದಾಯಕ್ಕೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ದೇವಾಂಗ ಹೋರಾಟ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ದೇವಾಂಗ ಸಮುದಾಯಕ್ಕೆ ಸೌಲಭ್ಯಗಳನ್ನು ನೀಡಲು ಒತ್ತಾಯಿಸಿ ಪ್ರತಿಭಟನೆ - Devange Fighting Committee
ದೇವಾಂಗ ಸಮುದಾಯಕ್ಕೆ ಸೌಲಭ್ಯಗಳನ್ನು ಒದಗಿಸಬೇಕೆಂದು ದೇವಾಂಗ ಹೋರಾಟ ಸಮಿತಿಯವರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ನಗರದ ತಹಶೀಲ್ದಾರರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಅವರು, ಸುಮಾರು ವರ್ಷಗಳಿಂದ ದೇವಾಂಗ ಸಮುದಾಯಕ್ಕೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡುವಲ್ಲಿ ವಿಫಲವಾಗಿದ್ದು, ಕೂಡಲೇ ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸುವಂತೆ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.