ಕರ್ನಾಟಕ

karnataka

ETV Bharat / state

ಕರ್ತವ್ಯಲೋಪ ಆರೋಪದ ಮೇಲೆ ಅಮಾನತು: ಆದೇಶದ ಬೆನ್ನಲ್ಲೇ ಹುಬ್ಬಳ್ಳಿ ಇನ್ಸ್​ಪೆಕ್ಟರ್ ಅಸ್ವಸ್ಥ

ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತುಗೊಂಡ ಬೆನ್ನಲ್ಲೇ ಕಸಬಾಪೇಟೆ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್​ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇನ್ಸ್​ಪೆಕ್ಟರ್ ಅಸ್ವಸ್ಥ
ಇನ್ಸ್​ಪೆಕ್ಟರ್ ಅಸ್ವಸ್ಥ

By

Published : Nov 15, 2022, 7:40 PM IST

ಹುಬ್ಬಳ್ಳಿ: ನವೆಂಬರ್ 12 ರಂದು ಕೊಲೆಯಾದ ಸಂತೋಷ್ ಮುರಗೋಡ್ ಪ್ರಕರಣದಲ್ಲಿ ಕಸಬಾಪೇಟೆ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯ ಮುಂದೆ ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದರು. ಈ ಪ್ರಕರಣದ ಹಿನ್ನೆಲೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಕಸಬಾಪೇಟೆ ಪೊಲೀಸ್ ಇನ್ಸ್​ಪೆಕ್ಟರ್ ಅಡಿವೆಪ್ಪ ಬನ್ನಿ ಅವರನ್ನು ಅಮಾನತು ಮಾಡಲಾಗಿದೆ.

ಇನ್ನು ಅಮಾನತು ಆದೇಶ ನೋಡಿ ಇನ್ಸ್​ಪೆಕ್ಟರ್ ಅಡಿವೆಪ್ಪ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥಗೊಂಡು ನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ಅಡಿವೆಪ್ಪಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವಿಷಯ ತಿಳಿಯುತ್ತಿದಂತೆ ಪೊಲೀಸ್ ಕಮೀಷನರ್ ಲಾಬೂ ರಾಮ್ ಅವರು ಆಸ್ಪತ್ರೆಗೆ ಭೇಟಿ ನೀಡಿದರು.

ಬಿಪಿ ಹೆಚ್ಚಾಗಿ ಅಡಿವೆಪ್ಪ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಚಿಕಿತ್ಸೆ ಮುಂದುವರೆದಿದೆ. ಕಸಬಾಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ.12 ರಂದು ಸಂತೋಷ್ ಮುರಗೋಡ್ ಕೊಲೆಯಾಗಿದ್ದು, ಇದಕ್ಕೆ ಕಸಬಾಪೇಟೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ಅನ್ನೋ ಆರೋಪ ಕೇಳಿ ಬಂದಿತ್ತು. ಅಂತೆಯೇ ಠಾಣೆ ಮುಂದೆ ಸಂತೋಷ್ ಶವ ಇಟ್ಟು ಪ್ರತಿಭಟನೆ ಮಾಡಲಾಗಿತ್ತು.

(ಓದಿ: ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ಪ್ರಕರಣ: ಇನ್ಸ್ ಪೆಕ್ಟರ್ ಎತ್ತಂಗಡಿ)

ABOUT THE AUTHOR

...view details