ಧಾರವಾಡ :ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆ ಇಂದು ಕೂಡ ಮುಂದುವರೆದಿದೆ. ಉಪನಗರ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿ ಬಸವರಾಜ ಮುತ್ತಗಿ ವಿಚಾರಣೆ ಎದುರಿಸಿದ್ದಾರೆ.
ಸಹ ಆರೋಪಿಗಳೊಂದಿಗೆ ಬಸವರಾಜ ಮುತ್ತಗಿ ವಿಚಾರಣೆಗೆ ಆಗಮಿಸಿದರು. ಸಿಬಿಐಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರ ಮಾವ ಚಂದ್ರಶೇಖರ ಇಂಡಿ ವಿಚಾರಣೆಯನ್ನ ತೀವ್ರಗೊಳಿಸಿದೆ. ನಿನ್ನೆ ನ್ಯಾಯಾಲಯದಿಂದ ಸಿಬಿಐ ಅಧಿಕಾರಿಗಳು ಇಂಡಿಯನ್ನು ತಮ್ಮ ವಶಕ್ಕೆ ಪಡೆದಿದ್ದರು.
ಹಂತಕರಿಗೆ ಕಂಟ್ರಿ ಪಿಸ್ತೂಲ್ ಪೂರೈಸಿದ ಆರೋಪಿಗಳು ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಪರಸ್ಪರ ಎದುರು ಕೂರಿಸಿ ವಿಚಾರಣೆ ನಡೆಸಿ ಸಿಬಿಐ ಅಧಿಕಾರಿಗಳು ಮಹತ್ವದ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ.