ಹುಬ್ಬಳ್ಳಿ:ಹುಬ್ಬಳ್ಳಿಯಿಂದ ಅಂತರರಾಜ್ಯ ಬಸ್ ಸಂಚಾರವನ್ನು ಆರಂಭಿಸಲು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗದಲ್ಲಿ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಗ್ಗೆ ನಿರ್ದೇಶನ ಬಂದ ಕೂಡಲೇ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ ಗಳ ಕಾರ್ಯಾಚರಣೆಯನ್ನು ಮರು ಆರಂಭ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
ಹುಬ್ಬಳ್ಳಿಯಿಂದ ಶೀಘ್ರ ಅಂತರ ರಾಜ್ಯ ಬಸ್ ಸಂಚಾರ ಆರಂಭ: ವಿಭಾಗೀಯ ನಿಯಂತ್ರಣಾಧಿಕಾರಿ - ಶೀಘ್ರದಲ್ಲೇ ಅಂತರ ರಾಜ್ಯ ಬಸ್ ವ್ಯವಸ್ಥೆ
ಶೀಘ್ರದಲ್ಲೇ ಅಂತರ ರಾಜ್ಯ ಬಸ್ ವ್ಯವಸ್ಥೆ ಕಲ್ಪಿಸುವುದಾಗಿ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
![ಹುಬ್ಬಳ್ಳಿಯಿಂದ ಶೀಘ್ರ ಅಂತರ ರಾಜ್ಯ ಬಸ್ ಸಂಚಾರ ಆರಂಭ: ವಿಭಾಗೀಯ ನಿಯಂತ್ರಣಾಧಿಕಾರಿ Bus](https://etvbharatimages.akamaized.net/etvbharat/prod-images/768-512-07:32:42:1598364162-kn-hbl-08-inter-state-bus-av-7208089-25082020193037-2508f-1598364037-622.jpg)
ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಿಂದ ಮಹಾರಾಷ್ಟ್ರಕ್ಕೆ 38, ಗೋವಾ 11, ತೆಲಂಗಾಣ12, ತಮಿಳುನಾಡು 2 ಹಾಗೂ ಆಂಧ್ರಪ್ರದೇಶಕ್ಕೆ 2 ಒಟ್ಟು 65 ಬಸ್ಗಳು ಸಂಚರಿಸುತ್ತಿದ್ದವು.
ಮುಂಬೈ, ಶಿರಡಿ, ಪಿಂಪ್ರಿ, ಹೈದರಾಬಾದ್, ಚೆನ್ನೈ, ಸೋಲಾಪುರ ಮುಂತಾದ ಪ್ರಮುಖ ಸ್ಥಳಗಳಿಗೆ ವೋಲ್ವೊ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಹಾಗೂ ರಾಜಹಂಸ ಸೇರಿದಂತೆ 26 ಪ್ರತಿಷ್ಟಿತ ಐಶಾರಾಮಿ ಬಸ್ಗಳು ಸಂಚರಿಸುತ್ತಿದ್ದವು.
ಇವುಗಳೊಂದಿಗೆ ಮುಂಬೈ, ಪೂನಾ, ಬೊರಿವಿಲಿ, ಪಣಜಿ, ವಾಸ್ಕೋ, ಮಡಗಾಂವ, ಔರಂಗಾಬಾದ್, ಇಚಲಕರಂಜಿ, ಮೀರಜ, ಸೋಲಾಪುರ, ಬಾರ್ಶಿ, ಮಂತ್ರಾಲಯ, ಹೈದರಾಬಾದ್ ಮತ್ತಿತರ ಸ್ಥಳಗಳಿಗೆ 39 ವೇಗದೂತ ಬಸ್ ಗಳನ್ನು ಸಹಾ ಕಾರ್ಯಾಚರಣೆ ಮಾಡಲಾಗುತ್ತಿತ್ತು.
ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಯಾವ ಮಾರ್ಗಗಳಲ್ಲಿ ಯಾವ ಬಗೆಯ ಮತ್ತು ಎಷ್ಟು ಬಸ್ಗಳನ್ನು ಕಾರ್ಯಾಚರಣೆ ಮಾಡಬೇಕು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಅವರುತಿಳಿಸಿದ್ದಾರೆ.