ಕಲಘಟಗಿ: ತಾಲೂಕಿನ ಗಳಗಿ ಹುಲ್ಲಕೊಪ್ಪ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಹದಿನಾಲ್ಕನೇ ಹಣಕಾಸು ಅನುದಾನವನ್ನು ಸರಿಯಾದ ಕಾಮಗಾರಿ ಮಾಡದೆ ಅವ್ಯಹಾರ ಎಸಗಿದ್ದಾರೆ ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹುಲಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ: ತನಿಖೆಗೆ ಗ್ರಾಮಸ್ಥರ ಒತ್ತಾಯ...! - Kalaghatagi protest news
ಕಲಘಟಗಿ ತಾಲೂಕಿನ ಗಳಗಿ ಹುಲ್ಲಕೊಪ್ಪ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸದಸ್ಯರು ಹದಿನಾಲ್ಕನೇ ಹಣಕಾಸು ಅನುದಾನವನ್ನು ಸರಿಯಾದ ಕಾಮಗಾರಿ ಮಾಡದೆ ಅವ್ಯಹಾರ ಎಸಗಿದ್ದಾರೆ ಎಂದು ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಲಘಟಗಿ
ಗ್ರಾಮ ಪಂಚಾಯತ್ ಪಿಡಿಓ ಮತ್ತು ಸಿಬ್ಬಂದಿ ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ಯಾವುದೇ ಯೋಜನೆಗಳು ಗ್ರಾಮದ ಜನತೆಗೆ ತಲುಪಿಸದೆ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಸಂಪೂರ್ಣ ಅನುದಾನದ ಮಾಹಿತಿ ನೀಡುವಂತೆ ಆಗ್ರಹಿಸಿದರು.
ಹುಲಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರದ ತನಿಖೆಗೆ ಗ್ರಾಮಸ್ಥರ ಒತ್ತಾಯ
ಸ್ಥಳಕ್ಕೆ ಆಗಮಿಸಿದ ತಾ.ಪಂ ಇಒ ಎಂ.ಎಸ್ ಮೇಟಿಗೆ ಹೆಚ್ಚಿನ ತನಿಖೆಗೆ ಒತ್ತಾಯಿಸಿ ಮನವಿ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಅಣ್ಣಪ್ಪ ದೇಸಾಯಿ, ತಾ ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಈರಯ್ಯ ಸಿದ್ಧಾಪೂರಮಠ ಹಾಗೂ ಗ್ರಾಮದ ಹಿರಿಯರು ಇದ್ದರು.