ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆಸುವುದು, ಬಿಡುವುದು ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ. ಕೋವಿಡ್ ಹಿನ್ನೆಲೆ ರಾಜ್ಯದಲ್ಲಿ ಆರು ತಿಂಗಳು ಯಾವುದೇ ಚುನಾವಣೆ ನಡೆಸದಂತೆ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಸಚಿವ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.
ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದಾರೆ ನಗರದಲ್ಲಿಂದು ಮಾತನಾಡಿದ ಅವರು, ಸಭೆಯ ನಿರ್ಧಾರವನ್ನು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಪ್ರವಾಹ, ಬರ ಇಂಥ ಪರಿಸ್ಥಿತಿಯಲ್ಲಿ ಚುನಾವಣೆ ಮುಂದೂಡಲು ಅವಕಾಶವಿದೆ. ನ್ಯಾಯಾಲಯದ ಗಮನಕ್ಕೆ ಈ ವಿಷಯ ತಂದರೆ ಅದನ್ನು ನ್ಯಾಯಾಲಯ ಪರಿಗಣಿಸುವ ವಿಶ್ವಾಸವಿದೆ ಎಂದರು.
ಕೋವಿಡ್ ತಡೆಗಟ್ಟಲು ಪರಿಣಾಮಕಾರಿ ಕೆಲಸ ಮಾಡಿದ್ದಕ್ಕೆ ಈಗ ವೈರಸ್ ಕಂಟ್ರೋಲ್ಗೆ ಬರುತ್ತಿದೆ. ಅನ್ಲಾಕ್ ಮಾಡಿದ್ದಕ್ಕೆ ಜನರು ಮೈ ಮರೆಯಬಾರದು. ಸರ್ಕಾರದ ಜೊತೆಗೆ ಜನರ ಸಹಭಾಗಿತ್ವ ಇದ್ದರೆ ಮಾತ್ರ ಕೋವಿಡ್ ಸಂಪೂರ್ಣವಾಗಿ ಹಿಮ್ಮೆಟ್ಟಿಸಲು ಸಾಧ್ಯ ಎಂದು ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾರಂಭ ಮಾಡಿದರೆ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ನಾವು ಕೂಡ ಕಂಪನಿ ಮುಖ್ಯಸ್ಥರ ಜೊತೆ ಮಾತುಕತೆ ಮಾಡಿದ್ದೇವೆ. ಇಲ್ಲಿ ಕಂಪನಿ ಕಾರ್ಯಾರಂಭಕ್ಕೆ ಯಾವುದೇ ಅಡತಡೆಗಳಿಲ್ಲ. ಎಲ್ಲ ಮೂಲ ಸೌಲಭ್ಯ ಒದಗಿಸಲಿದ್ದೇವೆ ಎಂದರು.
ಓದಿ:ವಿಜಯಪುರ ಮರ್ಯಾದಾ ಹತ್ಯೆ: ಆರೋಪಿಗಳ ಪತ್ತೆಗೆ ತಂಡ ರಚನೆ