ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಪ್ರಶಾಂತ್ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ಕೇಕರೆ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತನ ನಿವಾಸದ ಮೇಲೆ ಐಟಿ ದಾಳಿ - ಈಟಿವಿ ಭಾರತ ಕನ್ನಡ
ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಪ್ರಶಾಂತ್ ಕೇಕರೆ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Etv Bharat
ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿಯೂ ಪ್ರಶಾಂತ್ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಚುನಾವಣೆ ಹೊತ್ತಿನಲ್ಲಿ ಮತ್ತೆ ವಿನಯ್ ಕುಲಕರ್ಣಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದು, ಈ ಸಂದರ್ಭದಲ್ಲಿ ಇದೆಲ್ಲ ಸಹಜ ಎಂದ ಪ್ರಶಾಂತ್ ಕೇಕರೆ ಅಧಿಕಾರಿಗಳಿಗೆ ಮನೆ ಕೀ ನೀಡಿ ಮನೆಯ ಒಳಗಡೆ ತೆರಳಿದ್ದಾರೆ.
ಇದನ್ನೂ ಓದಿ :ಶಾಸಕ ಕೃಷ್ಣ ಕಲ್ಯಾಣಿ ನಿವಾಸ, ಕಚೇರಿಗಳ ಮೇಲೆ ಐಟಿ, ಇಡಿ ದಾಳಿ..
Last Updated : May 4, 2023, 7:38 PM IST