ಹುಬ್ಬಳ್ಳಿ: ರಾಜ್ಯದಲ್ಲಿ ಚುನಾವಣಾ ಕಾವು ಏರುತ್ತಿದೆ. ಇದರ ಮಧ್ಯೆ ಐಟಿ ಅಧಿಕಾರಿಗಳು ಫಿಲ್ಡಿಗೆ ಇಳಿದಿದ್ದಾರೆ. ವಾಣಿಜ್ಯನಗರಿ ಹುಬ್ಬಳ್ಳಿಗೆ ಐಟಿ ಅಧಿಕಾರಿಗಳು ಲಗ್ಗೆ ಇಟ್ಟಿದ್ದು, ಬಿಲ್ಡರ್ಸ್ ಗಳಿಗೆ ಶಾಕ್ ಕೊಟ್ಟಿದ್ದಾರೆ. ಅಂಕಿತಾ ಬಿಲ್ಡರ್ಸ್ ಮನೆ ಹಾಗೂ ಕಚೇರಿ ಮೇಲೆ ಐಟಿ ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿಯ ನಿಲೀಜನ ರಸ್ತೆಯಲ್ಲಿರುವ ಕಚೇರಿ ಹಾಗೂ ಮಂಜುನಾಥ್ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದು, ಅಂಕಿತಾ ಡೆವಲಪರ್ಸ್ನ ಮಾಲೀಕ ನಾರಾಯಣ ಬಿ ಆಚಾರ್ಯ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನೂ ಏಕಕಾಲಕ್ಕೆ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಮಂಗಳೂರು ಕಾಂಗ್ರೆಸ್ ಮುಖಂಡನ ಮನೆ ಕಚೇರಿ ಮೇಲೆ ಐಟಿ ದಾಳಿ: ಇನ್ನೊಂದೆಡೆ ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿಯ ಅವರ 2 ಮನೆ ಮತ್ತು ಕಚೇರಿ ಮೇಲೆ ಆದಾಯ ತೆರಿಗೆ (Income Tax) ಇಲಾಖೆ ಅಧಿಕಾರಿಗಳು (ಏಪ್ರಿಲ್ 16-2023) ರಂದು ದಾಳಿ ನಡೆಸಿದ್ದರು. ಶನಿವಾರ ಬೆಳಗ್ಗೆ 7 ಗಂಟೆಗೆ ರಾಜ್ಯದ ಬೇರೆ ಬೇರೆ ಕಡೆಯ 14 ಮಂದಿ ಅಧಿಕಾರಿಗಳು ವಿವೇಕ್ ರಾಜ್ ಪೂಜಾರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ್ದರು. ಅತ್ತಾವರ ಮತ್ತು ಮಣ್ಣಗುಡ್ಡೆಯಲ್ಲಿರುವ ಎರಡು ಮನೆಗೆ ಹಾಗೂ ವಿವೇಕನಗರದಲ್ಲಿರುವ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದರು.
ಇದನ್ನೂ ಓದಿ:ಐಟಿ ದಾಳಿ ಅಂತ್ಯ: ಕೆಜಿಎಫ್ ಬಾಬು ವಿರುದ್ಧ ದೂರು ದಾಖಲಿಸಿದ ಚುನಾವಣಾ ಅಧಿಕಾರಿಗಳು