ಕರ್ನಾಟಕ

karnataka

ETV Bharat / state

ನನ್ನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ: ಜಗದೀಶ್ ಶೆಟ್ಟರ್

ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಕಾಂಗ್ರೆಸ್ ಪಕ್ಷ ಯಾವ ಜವಾಬ್ದಾರಿ ನೀಡುತ್ತದೋ ಅದನ್ನು ನಾನು ನಿಭಾಯಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

Jagadish Shettar
ಜಗದೀಶ್ ಶೆಟ್ಟರ್

By

Published : May 28, 2023, 1:00 PM IST

ಬಿಜೆಪಿ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ

ಹುಬ್ಬಳ್ಳಿ: ಕಾಂಗ್ರೆಸ್​​ ಪಕ್ಷಕ್ಕೆ ನಾನು ಯಾವುದೇ ಷರತ್ತು ಹಾಕದೇ ಬಂದಿದ್ದೇನೆ. ನಾನು ಸಚಿವನಾಗಬೇಕು ಎಂಬ ಅಭಿಲಾಷೆ ಜನರಲ್ಲಿತ್ತು. ಆದರೆ ಹಲವು ಕಾರಣಗಳಿಂದ ಅವಕಾಶ ಸಿಕ್ಕಿಲ್ಲ. ಇನ್ನೂ ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಿನ ಸಂಪುಟ ರಚನೆಯ ನಂತರ ಕುಳಿತು ಚರ್ಚಿಸುವ ಬಗ್ಗೆ ಮಾತಾಗಿದೆ. ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ ಎಂದರು.

ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ನನ್ನ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತದೆ. ಕಾಂಗ್ರೆಸ್​ಗೆ ಜನರು ಬೆಂಬಲ ನೀಡಿದ್ದಾರೆ. ನನಗೆ ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತದೋ ಅದನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಸಾಕಷ್ಟು ಪ್ರಮುಖ ಸ್ಥಾನಗಳು ಸಿಕ್ಕಿವೆ. ಮುಂದಿನ ಕ್ಯಾಬಿನೆಟ್​ನಲ್ಲಿ ನಿರ್ಧಾರ ಮಾಡುತ್ತೇವೆ ಎಂದಿದ್ದಾರೆ. ಗ್ಯಾರಂಟಿ ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಪ್ರತಿಪಕ್ಷದವರು ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಹೊಸ ಸರ್ಕಾರ ಬಂದಿದೆ. ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತದೆ. ಎಂಪಿ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ ಎಂದು ತಿಳಿಸಿದರು.

ತಮ್ಮ ಸೋಲಿನ ವಿಚಾರವಾಗಿ ಪ್ರತಿಕ್ರಿಯಿಸಿ, ಕಾರಣವನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕರೊಂದಿಗೆ ಚರ್ಚೆ ಆಗಿಲ್ಲ. ಸವದಿ ಹಾಗೂ ನನಗೂ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ ಆಗಿಲ್ಲ. ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ?. ರಾಜ್ಯದಲ್ಲಿ ಬಿಜೆಪಿಯನ್ನು ಈ ಪರಿಸ್ಥಿತಿಗೆ ತರಲು ಕಾರಣರಾದವರು ಈಗ ಎಲ್ಲಿದ್ದಾರೆ?. ಇನ್ನೂ ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ನಾಪತ್ತೆಯಾಗಿದ್ದಾರೆ. ವಿರೋಧ ಪಕ್ಷದ ನಾಯಕನನ್ನು ಆರಿಸಲು ಯಾರೂ ಇಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು ಎಂದು ಪರೋಕ್ಷವಾಗಿ ಬಿ.ಎಲ್.ಸಂತೋಷ್​ಗೆ ಟಾಂಗ್ ಕೊಟ್ಟರು. ತಾಕತ್ತಿದ್ದರೆ ಆರ್​ಎಸ್​ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂಬ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ, ಆರ್​ಎಸ್​ಎಸ್​ ಹಾಗೂ ಭಜರಂಗದಳವನ್ನು ಯಾರು ಬ್ಯಾನ್ ಮಾಡಿದ್ದಾರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್​ಗೆ ಮಾಜಿ ಸಿಎಂ ಬೊಮ್ಮಾಯಿ ಸವಾಲು: ಆರ್​ಎಸ್​ಎಸ್​ ಮತ್ತು ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೂ ಆರ್​ಎಸ್​ಎಸ್​ ನಿಷೇಧ ಮಾಡುವ ಕೆಲಸ ನಡೆದಿತ್ತು. ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಸಂಘ ಪರಿವಾರವನ್ನು ನಿಷೇಧ ಮಾಡುವ ಶಕ್ತಿ ಯಾರಿಗೂ ಇಲ್ಲ. ಅವರಿಗೆ ತಾಕತ್ತಿದ್ದರೆ ಆರ್​ಎಸ್​ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಸವಾಲು ಹಾಕಿದ್ದರು.

ಇದನ್ನೂ ಓದಿ:ತಾಕತ್ತಿದ್ದರೆ ಆರ್​ಎಸ್ಎಸ್, ಬಜರಂಗದಳ ನಿಷೇಧಿಸಲಿ: ಕಾಂಗ್ರೆಸ್​ಗೆ ಮಾಜಿ ಸಿಎಂ ಬೊಮ್ಮಾಯಿ ಸವಾಲು

ABOUT THE AUTHOR

...view details