ಹುಬ್ಬಳ್ಳಿ:ಮುಖ್ಯಮಂತ್ರಿ ಬದಲಾವಣೆಯ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ. ರಾಷ್ಟ್ರೀಯ ನಾಯಕರಾಗಲಿ, ಪಕ್ಷದ ನಾಯಕರಾಗಲಿ ಯಾರೂ ಕೂಡ ಈ ವಿಷಯ ಪ್ರಸ್ತಾಪಿಸಿಲ್ಲ. ಹಾಗಾಗಿ, ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ದೆಹಲಿಯಲ್ಲಿ ನಾನು ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ವೈಷ್ಣೋದೇವಿ ದರ್ಶನಕ್ಕೆ ಹೋದಾಗ ದೆಹಲಿಗೆ ಹೋಗಿದ್ದೆ ಅಷ್ಟೇ. ಅಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ನಾನೇನು ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ, ಡಿಕೆಶಿ ಅವರನ್ನು ಭೇಟಿಯಾದೆನೇ? ಎಂದರು.