ಹುಬ್ಬಳ್ಳಿ: ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿ, ಸಂತ್ರಸ್ತರ ಅಹವಾಲು ಆಲಿಸಿದರು.
ನೆರೆಯಿಂದ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಜಗದೀಶ್ ಶೆಟ್ಟರ್..
ಹುಬ್ಬಳ್ಳಿ ತಾಲೂಕಿನ ಗ್ರಾಮಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಭೇಟಿ ನೀಡಿದರು. ಅತಿವೃಷ್ಠಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
shetter
ಹುಬ್ಬಳ್ಳಿ ತಾಲೂಕಿನ ನೂಲ್ವಿ ಹಾಗೂ ಇನ್ನಿತರ ಗ್ರಾಮಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿದರು. ಹಾನಿಯಾದ ಕುಟುಂಬಸ್ಥರ ಜೊತೆ ಚರ್ಚೆ ಮಾಡಿ ಆದಷ್ಟು ಬೇಗ ಎಲ್ಲ ಸಮಸ್ಯೆ ಬಗೆಹರಿಯಲಿದೆ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಧನ ಸಂತ್ರಸ್ತರ ಅಕೌಂಟ್‌ಗೆ ಬರ್ತಿದೆ ಎಂದು ಅವರು ತಿಳಿಸಿದರು.ಇದೇ ಸಂದರ್ಭದಲ್ಲಿ ಕುಂದಗೋಳ ಕ್ಷೇತ್ರದ ಶಾಸಕರಾದ ಕುಸುಮಾ ಸಿ.ಶಿವಳ್ಳಿ, ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಉಪವಿಭಾಗಾಧಿಕಾರಿ ಮಹ್ಮದ್ ಜುಬೇರ್ ಮತ್ತಿತರರು ಉಪಸ್ಥಿತರಿದ್ದರು.