ಹುಬ್ಬಳ್ಳಿ:ಮಧುರ ಕಾಲೋನಿಯಲ್ಲಿರುವ ತಮ್ಮ ನಿವಾಸದ ಬಳಿ ‘ವಿ ಬಾಸ್ಕೆಟ್ ಸಂಸ್ಥೆ’ ವತಿಯಿಂದ ರಿಯಾಯಿತಿ ದರದಲ್ಲಿ ಹಣ್ಣು, ತರಕಾರಿ ಮಾರಾಟ ಮಾಡುವ ವಾಹನಗಳಿಗೆ
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.
ವಾಹನಗಳಿಗೆ ಚಾಲನೆ ನೀಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ವಿ ಬಾಸ್ಕೆಟ್ ಸಂಸ್ಥೆಯಿಂದ ನೇರವಾಗಿ ರೈತರಿಂದ ಹಣ್ಣು ಹಾಗೂ ತರಕಾರಿಗಳನ್ನು ಖರೀದಿ ಮಾಡಲಾಗುವುದು. ಬಳಿಕ ಖರೀದಿಸಿದ ಹಣ್ಣು ಮತ್ತು ತರಕಾರಿಗಳ ಗುಣಮಟ್ಟವನ್ನು ಪರಿಶೀಲಿಸಿ, ಅವುಗಳನ್ನು ಸ್ವಚ್ಛಗೊಳಿಸಿ ಬೇಡಿಕೆಗೆ ಅನುಸಾರ ಗ್ರಾಹಕರಿಗೆ ತಲುಪಿಸಲಾಗುವುದು.