ಕರ್ನಾಟಕ

karnataka

ETV Bharat / state

ಡ್ರಗ್ಸ್​​ ನಿಯಂತ್ರಣಕ್ಕೆ ರಾಜ್ಯಸರ್ಕಾದಿಂದ ಕಟ್ಟುನಿಟ್ಟಿನ ಕ್ರಮ; ಸಚಿವ ಶೆಟ್ಟರ್​ - ಸಚಿವ ಜಗದೀಶ್​ ಶೆಟ್ಟರ್​ ಲೇಟೆಸ್ಟ್​ ಹುಬ್ಬಳ್ಳಿ ಭೇಟಿ

ಕೆಲ ತಾಂತ್ರಿಕ ಕಾರಣದಿಂದಾಗಿ ಬೆಳೆ ಪರಿಹಾರ ತಲುಪಿಲ್ಲ. ರೈತರಿಗೆ ಪರಿಹಾರವನ್ನು ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಸಚಿವ ಶೆಟ್ಟರ್ ಹೇಳಿದರು.

jagadish shetter reaction about drugs issue
ಸಚಿವ ಜಗದೀಶ್​ ಶೆಟ್ಟರ್​

By

Published : Sep 7, 2020, 4:31 PM IST

ಹುಬ್ಬಳ್ಳಿ: ಡ್ರಗ್ಸ್‌ ದಂಧೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್​ ಶೆಟ್ಟರ್​
ನಗರದ ಪ್ರವಾಸಿ ‌ಮಂದಿರದಲ್ಲಿ ಪ್ರವಾಹ ನಿಯಂತ್ರಣಾ ಕಿಟ್ ವಿತರಣೆ ಮಾಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ತಡೆಗೆ ಸಿಎಂ ಯಡಿಯೂರಪ್ಪ ಈಗಾಗಲೇ ಪೊಲೀಸ್ ಇಲಾಖೆಗೆ ತಾಕೀತು ಮಾಡಿದ್ದಾರೆ. ಡ್ರಗ್ಸ್ ಜಾಲ ಸಂಪೂರ್ಣ ತಡೆಗಟ್ಟಲು ಪ್ರಯತ್ನಿಸಲಾಗುವುದು. ಇದರಲ್ಲಿ ಯಾರೇ ಶಾಮೀಲಾಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್​
ಬೆಳೆ ಪರಿಹಾರ ಸಮಪರ್ಕವಾಗಿ ಬಿಡುಗಡೆಯಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲ ತಾಂತ್ರಿಕ ಕಾರಣದಿಂದಾಗಿ ಬೆಳೆ ಪರಿಹಾರ ತಲುಪಿಲ್ಲ. ರೈತರಿಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು. ಕ್ಯಾಬಿನೆಟ್ ಮೀಟಿಂಗ್​ನಲ್ಲಿ ಹೆಸರಿಗೆ ಬೆಂಬಲ ನೀಡಲು ಚರ್ಚೆ ನಡೆದಿದೆ. ಆದಷ್ಟು ಬೇಗ ಹೆಸರು ಖರೀದಿ ಕೇಂದ್ರ ತೆರೆಯಲು ಕೃಷಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದರು.
ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ವಿಚಾರ ಈಗ ಕೋರ್ಟ್‌ನಲ್ಲಿದೆ. ಚುನಾವಣೆಗೆ ತಡೆಯಾಜ್ಞೆ ನೀಡಲಾಗಿದೆ. ಆದಷ್ಟು ಬೇಗ ತಡೆಯಾಜ್ಞೆ ತೆರವುಗೊಳಿಸಿ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ABOUT THE AUTHOR

...view details