ಹುಬ್ಬಳ್ಳಿ:ಸಿದ್ದರಾಮೋತ್ಸವದಿಂದ ಬಿಜೆಪಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ, ಬದಲಿಗೆ ಅದು ಕಾಂಗ್ರೆಸ್‌ಗೆ ಸೈಡ್ ಎಫೆಕ್ಟ್ ಆಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಇಂತಹ ಅನೇಕ ಸಮಾವೇಶಗಳು ಜರುಗಿದ್ದು, ಇದರಿಂದ ಭಾರತೀಯ ಜನತಾ ಪಾರ್ಟಿಗೆ ಯಾವುದೇ ತೊಂದರೆಯಾಗಿಲ್ಲ ಎಂದರು. ಇದೇ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿದೆ ಎಂಬ ಜಮೀರ್ ಅಹಮದ್ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಜಮೀರ್ ಅಹ್ಮದ್ ಖಾನ್ ಮತ್ತು ಡಿ.ಕೆ.ಶಿವಕುಮಾರ್ ತಪ್ಪು ಮಾಡಿಲ್ಲ ಅಂದಮೇಲೆ ಹೆದರುವುದೇಕೆ? ಎಂದು ಪ್ರಶ್ನಿಸಿದರು.