ಹುಬ್ಬಳ್ಳಿ: ಭಾರತೀಯ ಜನತಾ ಪಾರ್ಟಿ ಹನ್ನೆರಡು ಸ್ಥಾನವನ್ನು ಪಡೆಯುವ ಮೂಲಕ ನಿರೀಕ್ಷಿತ ಫಲಿತಾಂಶವನ್ನು ಪಡೆದಿದೆ. ಕಾಂಗ್ರೆಸ್ ಜೆಡಿಎಸ್ ಅಪಪ್ರಚಾರ ಮಾಡಿದ್ದಕ್ಕೆ ಜನತೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಬಿಜೆಪಿಗೆ ನೈತಿಕತೆಯ ವಿಜಯ ಸಿಕ್ಕಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಉಪಚುನಾವಣೆಯ ಹನ್ನೆರಡು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ತಮ್ಮ ಮನೆಯ ಮುಂದೆ ನೂರಾರು ಕಾರ್ಯಕರ್ತರು ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಯಡಿಯೂರಪ್ಪ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಜನಾದೇಶ ಸಿಕ್ಕಿದೆ, ಜನರು ಎಲ್ಲವನ್ನೂ ಪರಿಶೀಲಿಸಿ ಸ್ಥಿರ ಸರ್ಕಾರಕ್ಕೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಬಿಜೆಪಿಯನ್ನು ಆಯ್ಕೆ ಮಾಡಿದ್ದಾರೆ ಎಂದ ಅವರು, ಎಲ್ಲ ಮತ ನೀಡಿದ ಜನತೆಗೆ ಅಭಿನಂದನೆ ಸಲ್ಲಿಸಿದರು.