ಕರ್ನಾಟಕ

karnataka

ETV Bharat / state

ಕುಮಾರಸ್ವಾಮಿ ಈ ಸಂದರ್ಭದಲ್ಲಿ ರಾಜಕೀಯ ಮಾಡಬಾರದು: ಶೆಟ್ಟರ್​ ವಾಗ್ದಾಳಿ - shetter latest news

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಲ್ಲಿ ಆರೋಗ್ಯ ಹಾಗೂ ಪೊಲೀಸ್ ಇಲಾಖೆಗಳು ಉತ್ತಮವಾಗಿ ಕಾರ್ಯ ಮಾಡುತ್ತಿವೆ.‌ ಇಂತಹ ಸಂದರ್ಭದಲ್ಲಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡಬಾರದು ಎಂದು ಜಗದೀಶ್​ ಶೆಟ್ಟರ್​ ವಾಗ್ದಾಳಿ ನಡೆಸಿದರು.

jagadish-shetter
ಹೆಚ್​ಡಿಕೆ ವಿರದ್ಧ ಶೆಟ್ಟರ್ ವಾಗ್ದಾಳಿ..!

By

Published : Apr 24, 2020, 3:14 PM IST

ಹುಬ್ಬಳ್ಳಿ:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಮನಗರಕ್ಕೆ ಮಾತ್ರ ಶೀಮಿತ ಎನ್ನುವಂತೆ ಮಾತನಾಡುವುದು ತಪ್ಪು ಎಂದು ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಲ್ಲಿ ಆರೋಗ್ಯ ಹಾಗೂ ಪೊಲೀಸ್ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ.‌ ಇಂತಹ ಸಂದರ್ಭದಲ್ಲಿ ರಾಜ್ಯ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡಬಾರದು ಎಂದರು.

ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಶಿಫ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಕೇವಲ ರಾಮನಗರಕ್ಕೆ ಸೀಮಿತ ಎನ್ನುವಂತೆ ಮಾತನಾಡಿದ್ದಾರೆ. ಅಲ್ಲಿಗೆ ಶಿಫ್ಟ್ ಮಾಡಿದ್ದು ಪೊಲೀಸ್ ಇಲಾಖೆಯ ನಿರ್ಧಾರವಾಗಿದೆ. ಅಲ್ಲದೆ ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶವೇ ಹೋರಾಟ ನಡೆಸುತ್ತಿದೆ. ಪರಿಸ್ಥಿತಿ ಅರ್ಥ ಮಾಡಿಕೊಳ್ಳದೇ ಕುಮಾರಸ್ವಾಮಿಯವರು ಮಾತನಾಡುವುದು ಸರಿಯಲ್ಲ ಎಂದರು.

ಹೆಚ್​ಡಿಕೆ ವಿರದ್ಧ ಶೆಟ್ಟರ್ ವಾಗ್ದಾಳಿ

ಬೆಂಗಳೂರಿನಲ್ಲಿ ನಿತ್ಯ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಾದರಾಯನಪುರದ ಇಬ್ಬರಿಗೆ ಪಾಸಿಟಿವ್ ಬಂದಿದೆ ಎನ್ನೋದು ಸರ್ಕಾರದ ವೈಫಲ್ಯವಲ್ಲ.
ಕುಮಾರಸ್ವಾಮಿ ಸಹ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದಾರೆ, ಪರಿಸ್ಥತಿ ಅರ್ಥ ಮಾಡಿಕೊಳ್ಳಬೆಕು ಎಂದರು.

ಬೇರೆಲ್ಲೋ ಅವರನ್ನು ಶಿಫ್ಟ್ ಮಾಡಿದ್ರೆ ಸುಮ್ಮನಿರುತ್ತಿದ್ರಾ? ಅವರನ್ನು ಎಲ್ಲಿ ಶಿಫ್ಟ್ ಮಾಡಬೇಕು ಅನ್ನೋದನ್ನ ಅವರೇ ಹೇಳಲಿ ಎಂದರು.

ರಾಜ್ಯದ ಕಂಟೈನ್​ಮೆಂಟ್​ ಪ್ರದೇಶಗಳನ್ನು ಹೊರತುಪಡಿಸಿ ಲಾಕ್​ಡೌನ್ ಸಡಿಲಿಕೆ ಮಾಡಲಾಗಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಮುಂದಿನ ವಾರದೊಳಗೆ ಕೈಗಾರಿಕಾ ಚಟುವಟಿಕೆಗಳನ್ನು ಆರಂಭಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದರು.

ABOUT THE AUTHOR

...view details