ಕರ್ನಾಟಕ

karnataka

ETV Bharat / state

ಮುಖ್ಯಮಂತ್ರಿಗಳು ಶೀಘ್ರ ಗುಣಮುಖರಾಗಲಿ: ಸಚಿವ ಜಗದೀಶ್ ಶೆಟ್ಟರ್ ಹಾರೈಕೆ - Jagadish shetter latest news

ಕೊರೊನಾ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅತೀ ಶೀಘ್ರವಾಗಿ ಗುಣಮುಖವಾಗಲಿ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾರೈಸಿದ್ದಾರೆ.

ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

By

Published : Aug 3, 2020, 3:04 PM IST

ಹುಬ್ಬಳ್ಳಿ :ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೋವಿಡ್ ಪಾಸಿಟಿವ್ ಸೋಂಕಿನಿಂದ ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಹಾರೈಸಿದ್ದಾರೆ.

ನಾಡಿನ ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ತಮ್ಮನ್ನು ತೊಡಗಿಸಿಕೊಂಡಿರುವ ಸಿಎಂಗೆ ಸೋಂಕು ತಗುಲಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರು ಶೀಘ್ರ ಗುಣಮುಖರಾಗಿ ರಾಜ್ಯದ ಜನತೆಗೆ ಪುನಃ ಅವರ ದಕ್ಷ ಮತ್ತು ನಿಸ್ವಾರ್ಥ ಸೇವೆ ಬೇಗ ದೊರಕುವಂತಾಗಲಿ ಎಂದು ಶೆಟ್ಟರ್ ತಮ್ಮ ಹಾರೈಕೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details