ಹುಬ್ಬಳ್ಳಿ:ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರದಿಂದ ಅನಗತ್ಯವಾಗಿ ಕ್ಯಾತೆ ತೆಗೆಯಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕರ್ನಾಟಕದ ಬೆಳಗಾವಿ ಗಡಿ ವಿವಾದ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಮಹಾರಾಷ್ಟ್ರದವರೇ ಮೊದಲು ಸುಪ್ರೀಂಕೋರ್ಟ್ಗೆ ಹೋಗಿದ್ದರು. ವಿವಾದ ಕೋರ್ಟ್ನಲ್ಲಿ ಇತ್ಯರ್ಥವಾಗಬೇಕಾಗಿದೆ. ಆದರೆ, ಅದಕ್ಕೂ ಮುನ್ನವೇ ಜಗಳ ಮಾಡಿಕೊಂಡು ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.