ಹುಬ್ಬಳ್ಳಿ: ನಾನೀಗ ಶಿರಸಿಗೆ ತೆರಳುತ್ತಿದ್ದೇನೆ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಬಳಿ ನಾನು ಸಮಯ ಕೇಳಿದ್ದು, 10:30 ಕ್ಕೆ ಬರಲು ಹೇಳಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರ ಜೊತೆ ಮಾತಾಡಿದ್ದೇನೆ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಡುತ್ತೇನೆ ಎಂದರು.
ಶೆಟ್ಟರ್ ಅವರು ಶಿರಸಿಯಿಂದ ವಾಪಸ್ ಬಂದು ಹಿತೈಷಿಗಳ ಜೊತೆ ಚರ್ಚಿಸಿ ನನ್ನ ಮುಂದಿನ ಹೆಜ್ಜೆ ಬಗ್ಗೆ ನಿರ್ಧರಿಸುತ್ತೇನೆ ಎಂದಿದ್ದಾರೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಬಿಜೆಪಿ ನಾಯಕರಿಂದ ಮತ್ತೆ ಯಾವುದೇ ಕರೆ ಬಂದಿಲ್ಲ, ಕೊನೆಯ ಕ್ಷಣದಲ್ಲಿ ವಿಸ್ಮಯ ನಡೆಯೋಲ್ಲ. ಒಂದು ಹೆಜ್ಜೆ ಮುಂದೆ ಇಟ್ಟಿದ್ದೇನೆ, ಹಿಂದೆ ಸರಿಯಲ್ಲ ಎಂದು ತಮ್ಮ ಗಟ್ಟಿ ನಿರ್ಧಾರವನ್ನು ತಿಳಿಸಿದರು.
ಮೋದಿಗಾಗಲಿ, ಶಾ ಗಾಗಲಿ ಗ್ರೌಂಡ್ ಲೆವೆಲ್ನಲ್ಲಿ ನಡಿತಿರೋದು ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ - ಶೆಟ್ಟರ್: ಹಾಗೆ, ಕಾಂಗ್ರೆಸ್ ಸೇರ್ಪಡೆ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳು ತೆರೆದಿವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಹಿತೈಷಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಅವರಿಗೆ ಗ್ರೌಂಡ್ ಲೆವೆಲ್ ಅಲ್ಲಿ ಏನು ನಡೀತಿದೆ ಅನ್ನೋದು ತಿಳಿಯುತ್ತಿದೆಯೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿಗಳು, ಇಲ್ಲಿನ ನಾಯಕರು ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬೇಡ ಅಂತಾ ತೀರ್ಮಾನ ಮಾಡಿದಂತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:ಬಿಜೆಪಿ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ಗುಡ್ ಬೈ.. ಚುನಾವಣೆಗೆ ನಿಂತೇ ನಿಲ್ತೇನಿ - ಹೈಕಮಾಂಡ್ಗೆ ಶೆಟ್ಟರ್ ಸವಾಲು