ಹುಬ್ಬಳ್ಳಿ:ರಾಜ್ಯದ ಮೂರು ಪಕ್ಷಗಳಲ್ಲಿ ಅದರಲ್ಲೂ ಭಾರತೀಯ ಜನತಾ ಪಕ್ಷ(ಬಿಜೆಪಿ) ಮತ್ತು ಕಾಗ್ರೆಸ್ನಲ್ಲಿಟಿಕೆಟ್ ಪಡೆಯಲು ಆಕಾಂಕ್ಷಿಗಳು ಹೆಚ್ಚಿದ್ದು, ಸ್ಪರ್ಧೆಗೆ ಆಯಾ ಪಕ್ಷಗಳಲ್ಲೇ ಪೈಪೋಟಿ ಕಂಡುಬರುತ್ತಿದೆ. ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ಕೆಲವರು ಬಂಡಾಯದ ಬಾವುಟ ಹಾರಿಸಿದ್ದಾರೆ. ಅಥಣಿ ಕ್ಷೇತ್ರದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ತಮಗೆ ಟಿಕೆಟ್ ತಪ್ಪಿದ ಹಿನ್ನೆಲೆ ಕಾಂಗ್ರೆಸ್ ಸೇರ್ಪಡೆಯಾಗಿ ಅಭ್ಯರ್ಥಿಯಾಗಿ ಅಖಾಡಕ್ಕಿಳಿದಿದ್ದಾರೆ. ಈ ಮಧ್ಯೆ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಬಿಜೆಪಿ ಈವರೆಗೆ ಅಭ್ಯರ್ಥಿಯನ್ನು ಘೋಷಿಸಿಲ್ಲ. ಇದು ಮಾಜಿ ಸಿಎಂ ಶೆಟ್ಟರ್ ಅವರನ್ನು ಕೆರಳಿಸಿದೆ.
ಮಾತುಕತೆ ಬಳಿಕ ತೀರ್ಮಾನ ತಿಳಿಸುವೆ.. ಟಿಕೆಟ್ ಹಂಚಿಕೆ ವಿಚಾರದಲ್ಲಿಮನವೊಲಿಕೆ ಕಥೆ ಮುಗಿದು ಹೋಗಿದೆ. ಅನ್ ಕಡೀಷನಲ್ ಅವರು ಒಪ್ಪಿಕೊಳ್ಳಬೇಕು. ಇಂದು ರಾತ್ರಿ ಮತ್ತೊಮ್ಮೆ ಚರ್ಚೆ ನಡೆಯಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಶಿ ಸಹ ಬರುತ್ತಾರೆ. ಅವರೊಂದಿಗೆ ಮಾತುಕತೆ ನಡೆಸಿದ ನಂತರ ನನ್ನ ತೀರ್ಮಾನ ಏನು ಎಂದು ಪ್ರಕಟಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸಂಜೆಯ ಗಡುವು ಮುಗಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೊನೆಯ ನಿರ್ಧಾರಕ್ಕೆ ಬಂದಿದ್ದೇ. ಆದರೆ ಧರ್ಮೇಂದ್ರ ಪ್ರಧಾನ ಅವರು ನಮ್ಮ ಭೇಟಿಗೂ ಮುನ್ನ ಯಾವುದೇ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂದಿದ್ದಾರೆ. ಅವರು ರಾತ್ರಿ ಭೇಟಿಯ ನಂತರ ಅಂತಿಮ ನಿರ್ಧಾರ ತಿಳಿಸುತ್ತೇನೆ ಎಂದರು.