ಕರ್ನಾಟಕ

karnataka

ETV Bharat / state

ಜಾರಕಿಹೊಳಿ ಹಿಂದೂ ಪದ ಬಳಕೆ ವೈಯಕ್ತಿಕ ವಿಚಾರ, ಕಾಂಗ್ರೆಸ್​ಗೆ ಸಂಬಂಧಿಸಿದ್ದಲ್ಲ: ಡಿಕೆಶಿ - ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ

ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ನೀಡಿದ್ದು ಅವರ ವೈಯಕ್ತಿಕ ಅಭಿಪ್ರಾಯ. ಕಾಂಗ್ರೆಸ್ ಪಕ್ಷವೂ ಅದನ್ನು ತಳ್ಳಿಹಾಕುತ್ತದೆ, ಈ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಇಲ್ಲ ಎಂದು ಡಿ.ಕೆ. ಶಿವಕುಮಾರ ಹೇಳಿದ್ದಾರೆ.

KPCC president Sivakumar spoke to reporters in Hublitv Bharat
ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಮಾತನಾಡಿದರು.

By

Published : Nov 8, 2022, 1:27 PM IST

Updated : Nov 8, 2022, 3:26 PM IST

ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ್ದ ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಇದನ್ನು ಕಾಂಗ್ರೆ ಪಕ್ಷ ತಳ್ಳಿಹಾಕುತ್ತದೆ. ಇದರಿಂದ ಕಾಂಗ್ರೆಸ್​ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗುವುದಿಲ್ಲ. ಈ ಕುರಿತಾಗಿ ಸ್ಪಷ್ಟೀಕರಣ ಪಡೆದುಕೊಳ್ಳುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಹಿಂದೂ ಧರ್ಮದವನು. ನಮಗೆ ನಮ್ಮದೇ ಇತಿಹಾಸವಿದೆ. ಹಾಗಾಗಿ ಸತೀಶ್ ಹೇಳಿಕೆ ಅವರ ವೈಯಕ್ತಿಕ ವಿಚಾರ. ಅವರು ತಮ್ಮ ಮನೆಯಲ್ಲಿ ಮಾತನಾಡಿದ್ದರೆ ಏನೂ ಆಗುವುದಿಲ್ಲ. ಆದರೆ ಸಾರ್ವಜನಿಕ ಬದುಕಿನಲ್ಲಿ ಈ ತರಹ ಹೇಳಿಕೆ ನೀಡಬಾರದಿತ್ತು ಎಂದರು.

ಭಾರತ ಜೋಡೋದಿಂದ ಬಿಜೆಪಿಗೆ ಭಯ: ಭಾರತ ಜೋಡೋ ಯಾತ್ರೆ ಬಿಜೆಪಿಗೆ ಭಯ ತಂದಿದೆ. ಈ ಹಿಂದೆ ಗಾಂಧೀಜಿ ಭಾರತ ಜೋಡೋ ಮಾಡಿದ್ದರು. ಆ ನಂತರ ಮೋದಿ ಭಾರತ ತೋಡೋ ಮಾಡುತ್ತಿದ್ದಾರೆ. ಆದರೆ ರಾಹುಲ್ ಗಾಂಧಿ ಭಾರತ ಜೋಡೋ ಮಾಡುತ್ತಿದ್ದಾರೆ. ಇದೇ ನಮಗೂ ಅವರಿಗೆ ಇರುವ ವ್ಯತ್ಯಾಸ. ಅದನ್ನು ಸಹಿಸಲು ಆಗದ ಬಿಜೆಪಿಯವರು ಭಾರತ ಜೋಡೋ ನಿಲ್ಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಡಿಕೆಶಿ ಹರಿಹಾಯ್ದರು.

ಭೈರತಿ ಬಸವರಾಜ ಲಂಚ:ಸಚಿವ ಭೈರತಿ ಬಸವರಾಜ ಬೀದಿ ವ್ಯಾಪಾರಸ್ಥರಿಂದ ಹಣ ಪಡೆದಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್​, ಬಿಜೆಪಿ ಸರ್ಕಾರ ನಿಂತಿರುವುದೇ ಕಮಿಷನ್ ನಿಂದ. ಇದು ಲಂಚದ ಸರ್ಕಾರ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಉತ್ತರ ಕೊಡಬೇಕು. ಬೀದಿ ಬದಿ ವ್ಯಾಪಾರಿಗಳಿಂದಲೂ ಹಣ ಪಡೆಯುತ್ತಾರೆಂದರೇ ಬಿಜೆಪಿ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದಕ್ಕೆ ಇದು ತಾಜಾ ಉದಾಹರಣೆ ಎಂದು ಟೀಕಿಸಿದರು.

ಇದನ್ನೂ ಓದಿ:ಜಾರಕಿಹೊಳಿ ಹೇಳಿಕೆ ವಿರುದ್ಧ ಕೆರಳಿದ ಕೇಸರಿ ಪಡೆ: 'ಸ್ವಾಭಿಮಾನಿ ಹಿಂದೂ ಅಭಿಯಾನ' ಆರಂಭಿಸಿದ ಸುನಿಲ್ ಕುಮಾರ್

Last Updated : Nov 8, 2022, 3:26 PM IST

ABOUT THE AUTHOR

...view details