ಧಾರವಾಡ: ಕೃಷಿ ವಿವಿ ಸಿಬ್ಬಂದಿ ಕಾರು ಅಪಘಾತ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿ ಧಾರವಾಡ ಕೃಷಿ ವಿವಿಯಲ್ಲಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
'ಕೃಷಿ ವಿವಿ ಸಿಬ್ಬಂದಿ ಕಾರು ಅಪಘಾತ ಪ್ರಕರಣ'ವನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
'ಕೃಷಿ ವಿವಿ ಸಿಬ್ಬಂದಿ ಕಾರು ಅಪಘಾತ ಪ್ರಕರಣ'ವನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
'ಕೃಷಿ ವಿವಿ ಸಿಬ್ಬಂದಿ ಕಾರು ಅಪಘಾತ ಪ್ರಕರಣ'ವನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
33ನೇ ಘಟಿಕೋತ್ಸವ ಕಾರ್ಯಕ್ರಮ ಎದುರು ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತರು ಅಪಘಾತ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದರು. ಕಾರು ಅಪಘಾತದಲ್ಲಿ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಇಬ್ಬರು ಯುವತಿಯರನ್ನು ಗೋವಾಕ್ಕೆ ಕರೆದುಕೊಂಡ ಹೋದ ವಿಸಿ ಪಿ.ಎ. ಮುಲ್ಲಾ ಅವರನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.
ಕಾರ್ಯಕ್ರಮದ ಒಳಗೆ ನುಗ್ಗಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರು ನಡುವೆ ಮಾತಿನ ಚಕಮಕಿ ನಡೆಯಿತು.