ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ಸೇರಿ ಹಲವು ಸಂಘಟನೆಯ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ಕಾರ್ಯಕರ್ತರ ಪ್ರತಿಭಟನೆ
ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೊರೊನಾ ಹಿನ್ನೆಲೆ ಲಾಕ್‌ಡೌನ್ ಜಾರಿ ಮಾಡಿದ್ದರಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ..
Protest
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೇಡಿಕೆ ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಕೊರೊನಾ ಹಿನ್ನೆಲೆ ಲಾಕ್‌ಡೌನ್ ಜಾರಿ ಮಾಡಿದ್ದರಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅವರಿಗೆ ಸೂಕ್ತ ಪರಿಹಾರ ನೀಡಬೇಕು, ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿನ ಜನತೆಗೆ 6 ತಿಂಗಳ ಮಾಸಿಕ ನಗದು, ಯೋಜನಾ ನೌಕರರಿಗೆ ಕೊರೊನಾ ಕೆಲಸದ ಪ್ರೋತ್ಸಾಹ ಧನ ಮತ್ತು ಎಲ್ಲಾ ಕಾರ್ಮಿಕರಿಗೆ 6 ತಿಂಗಳವರೆಗೆ ಪಡಿತರ ಒದಗಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.