ಹುಬ್ಬಳ್ಳಿ: ಹಾಡಹಗಲೇ ಜೆಡಿಎಸ್ ಕಾರ್ಯಕರ್ತನ ಬೆನ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ವಿದ್ಯಾನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಹಾಡಹಗಲೇ ಬೆನ್ನಿಗೆ ಚೂರಿ... ಜೆಡಿಎಸ್ ಕಾರ್ಯಕರ್ತನ ಕೊಲೆಗೆ ಯತ್ನಿಸಿದ್ದ ಆರೋಪಿಗಳು ಅರೆಸ್ಟ್ - ಹುಬ್ಬಳ್ಳಿ ವಿದ್ಯಾನಗರ ಪೊಲೀಸರು
ಹಾಡಹಗಲೇ ಜೆಡಿಎಸ್ ಕಾರ್ಯಕರ್ತನಿಗೆ ಚಾಕು ಇರಿದು ಕೊಲೆಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾನಗರ ಪೋಲಿಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು
ಕಳೆದ ಎರಡು ದಿನಗಳ ಹಿಂದೆ ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತ ಸುಭಾಷ್ ಮುಂಡಗೋಡ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಪರಾರಿಯಾಗಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ವಿದ್ಯಾ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪುರುಷೋತ್ತಮ ಪೆನಕೊಂಡ, ಗೋಪಾಲ್ ಪೆನಕೊಂಡ, ಪ್ರದೀಪ್ ನಂದೋಡಗಿ ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ ಚಾಕು, ಎರಡು ಬೈಕ್ ವಶಕ್ಕೆ ಪಡೆದಿದ್ದಾರೆ.