ಕರ್ನಾಟಕ

karnataka

ETV Bharat / state

ಹೈದರಾಬಾದ್​​ನಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಪತ್ರಕರ್ತ: ಸಹಾಯಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಿದ ಕನ್ನಡಿಗ - ಹೈದರಾಬಾದ್​​ನಲ್ಲಿ ಅನಾರೋಗ್ಯ ಪತ್ರಕರ್ತ

ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ರಾಜೇಸಾಬ ಅನ್ಸಾರಿ ಹೈದ್ರಾಬಾದ್​ನ ಖಾಸಗಿ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತೀವ್ರ ಹೃದಯದ ಸಮಸ್ಯೆ ಹಾಗೂ ಮೂಲವ್ಯಾಧಿಯಿಂದ ಬಳಲುತ್ತಿರುವುದಾಗಿ ನೋವನ್ನು ತೋಡಿಕೊಂಡಿದ್ದಾರೆ. ಅಲ್ಲದೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಅವರು, ಕರ್ನಾಟಕ ಸರ್ಕಾರ ಅಥವಾ ತೆಲಂಗಾಣ ಸರ್ಕಾರ ತನ್ನ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.

ಪತ್ರಕರ್ತ
ಪತ್ರಕರ್ತ

By

Published : Apr 17, 2020, 4:04 PM IST

ಧಾರವಾಡ: ತೆಲಂಗಾಣದ ಹೈದರಾಬಾದ್​ನಲ್ಲಿರುವ ಜಿಲ್ಲೆಯ ಪತ್ರಕರ್ತನೊಬ್ಬನಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಲಾಕ್​ಡೌನ್​ ಹಿನ್ನೆಲೆ ತಮ್ಮ ಊರಿಗೆ ಬರಲಾಗದೇ ಅವರು ನರಳುತ್ತಿದ್ದಾರೆ. ತನ್ನ ಜೀವ ಉಳಿಸಿ ಎಂದು ಕರ್ನಾಟಕ ಸರ್ಕಾರ ಮತ್ತು ತೆಲಂಗಾಣ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ರಾಜೇಸಾಬ ಅನ್ಸಾರಿ ಹೈದ್ರಾಬಾದ್​ನ ಖಾಸಗಿ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ತೀವ್ರ ಹೃದಯದ ಸಮಸ್ಯೆ ಹಾಗೂ ಮೂಲವ್ಯಾಧಿಯಿಂದ ಬಳಲುತ್ತಿರುವುದಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಕುರಿತು ವಿಡಿಯೋ ಮಾಡಿರುವ ರಾಜೇಸಾಬ

ಲಾಕ್​ಡೌನ್​ ಹಿನ್ನೆಲೆ ಹೈದರಾಬಾದ್​ನ ಮಹಾತ್ಮ ಗಾಂಧಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಆದ್ರೆ ಈ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ರೋಗಿಗಳೇ ಹೆಚ್ಚಿದ್ದಾರೆ. ಹಾಗಾಗಿ ಅಲ್ಲಿನ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಡಬೇಕೆಂದು ರಾಜೇಸಾಬ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ABOUT THE AUTHOR

...view details