ಧಾರವಾಡ:ಜಿಲ್ಲೆಯಾದ್ಯಂತ ಜುಲೈ 15ರ ಮುಂಜಾನೆ 10ಗಂಟೆಯಿಂದ ಜುಲೈ 24ರ ರಾತ್ರಿ 8ಗಂಟೆಯವರೆಗೆ ಲಾಕ್ಡೌನ್ ಜಾರಿಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಘೋಷಣೆ ಮಾಡಿದ್ದಾರೆ.
ಜುಲೈ 15ರಿಂದ 24ರವರೆಗೆ ಧಾರವಾಡ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ಡೌನ್: ಶೆಟ್ಟರ್ ಮಹತ್ವದ ಘೋಷಣೆ - ಜಗದೀಶ್ ಶೆಟ್ಟರ್
ಜಿಲ್ಲೆಯಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣ ಕಾಣಿಸಿಕೊಳ್ಳುತ್ತಿರುವ ಕಾರಣ ಜುಲೈ 15ರಿಂದ 24ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಿ ಆದೇಶ ಹೊರಡಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಜೋರಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದು, ಧಾರವಾಡದ ಜಿಲ್ಲಾಧಿಕಾರಿಯ ನೂತನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನ ಅವಶ್ಯಕ ವಸ್ತುಗಳ ಪೂರೈಕೆಗೆ ವಿನಾಯಿತಿ ನೀಡಲಾಗಿದೆ ಎಂದರು. ಲಾಕ್ಡೌನ್ ಕುರಿತು ಜಿಲ್ಲಾಧಿಕಾರಿ ಅಧಿಕೃತವಾಗಿ ವಿವರಣೆ ನೀಡಿ, ಆದೇಶ ಹೊರಡಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.ಜಿಲ್ಲೆಯಿಂದ ಹೊರ ಹೋಗುವವರು ಹೋಗಲಿ, ಬೆಂಗಳೂರು ಮಾದರಿಯಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಎಲ್ಲರ ಜೊತೆ ಮಾತುಕತೆ ನಡೆಸಿದ್ದೇನೆ. ಲಾಕ್ಡೌನ್ ಆಗಲಿ ಎಂಬ ಸಲಹೆ ನೀಡಿದ್ದಾರೆ. ಈ ಕುರಿತು ವಿಡಿಯೋ ಕಾನ್ಪರೆನ್ಸ್ನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜತೆ ಮಾತನಾಡಲಾಗಿದ್ದು, ನಮಗೆ ಸಂಪೂರ್ಣ ಅಧಿಕಾರ ನೀಡಿದ್ದಾರೆ.
ಜಿಲ್ಲೆಯ ಜನರು ಅನಗತ್ಯವಾಗಿ ಹೊರ ಹೋಗಬಾರದು. ಮಾಸ್ಕ ಕಡ್ಡಾಯವಾಗಿ ಧರಿಸಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಹೆಚ್ಚು ಜನ ಸೇರಬಾರದು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.