ಧಾರವಾಡ:ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಯನ್ನು 3ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ ಅಕ್ಟೋಬರ್ 24ಕ್ಕೆ ಮುಂದೂಡಿಕೆ ಮಾಡಿ ಆದೇಶ ಹೊರಹಾಕಿದೆ.
ಕಲಬುರ್ಗಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಗೈರು ಹಿನ್ನೆಲೆ ವಿಚಾರಣೆ ಮುಂದೂಡಿದ ನ್ಯಾಯಾಲಯ - ಕಲಬುರ್ಗಿ ಹತ್ಯೆ ಪ್ರಕರಣ ವಿಚಾರಣೆ ಮುಂದೂಡಿದ ನ್ಯಾಯಾಲಯ
ಕಲಬುರಗಿ ಹತ್ಯೆಯ ಪ್ರಮುಖ ಆರೋಪಿ ಅಮೋಲ್ ಕಾಳೆ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆ ನ್ಯಾಯಾಲಯ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಿದೆ.

ಕಲಬುರ್ಗಿ ಹತ್ಯೆ ಪ್ರಕರಣ
ಕಲಬುರ್ಗಿ ಹತ್ಯೆ ಪ್ರಕರಣ : ವಿಚಾರಣೆ ಮುಂದೂಡಿದ ನ್ಯಾಯಾಲಯ
ಎಸ್‌ಐಟಿಯಿಂದ ಚಾರ್ಜಶೀಟ್ ಸಲ್ಲಿಕೆ ಬಳಿಕ ಇದೇ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಕಳೆದ ಆಗಸ್ಟ್ 17 ರಂದು ಜಿಲ್ಲಾ ನ್ಯಾಯಾಲಯಕ್ಕೆ ಎಸ್ಐಟಿ ಚಾರ್ಜಶೀಟ್ ಸಲ್ಲಿಸಿತ್ತು. ಚಾರ್ಜಶೀಟ್ ಸಲ್ಲಿಕೆ ಬಳಿಕ ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿದೆ. ಆರು ಆರೋಪಿಗಳ ಪೈಕಿ ಐವರನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆತಂದಿದ್ದರು.
ಪ್ರಮುಖ ಆರೋಪಿ ಅಮೋಲ್ ಕಾಳೆ ಗೈರು ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ. ಅಕ್ಟೋಬರ್ 24ಕ್ಕೆ ಪ್ರಕರಣದ ಎಲ್ಲ ಆರೋಪಿಗಳನ್ನು ಹಾಜರುಪಡಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿದೆ.
TAGGED:
ಧಾರವಾಡ ನ್ಯಾಯಾಲಯ