ಕರ್ನಾಟಕ

karnataka

ETV Bharat / state

ರೈಲು ಸಂಚಾರಕ್ಕೆ ಅನುಮತಿ ನೀಡಿರುವುದು ಖಂಡನೀಯ: ಕಳಸಾ ಬಂಡೂರಿ ಹೋರಾಟ ಸಮಿತಿ

ಕೊರೊನಾ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿವೆ. ಇಂತಹ ಸಂದಿಗ್ಧ ಸಂದರ್ಭದಲ್ಲಿ ರೈಲು ಸಂಚಾರ ಆರಂಭಿಸಲು ಹೊರಟಿರುವ ನಿರ್ಧಾರವನ್ನು ಕೂಡಲೇ ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಒತ್ತಾಯಿಸಿದೆ.

kalasa banduri committee
ಕಳಸಾ ಬಂಡೂರಿ ಹೋರಾಟ ಸಮಿತಿ

By

Published : May 11, 2020, 1:28 PM IST

ಹುಬ್ಬಳ್ಳಿ : ಕೊರೊನಾದಿಂದಾಗಿ ದೇಶವೇ ಸಂಕಷ್ಟದಲ್ಲಿ ಸಿಲುಕಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈಲು ಸೇವೆಯನ್ನು ಪ್ರಾರಂಭಿಸಲು ಹೊರಟಿರುವುದು ಖಂಡನೀಯ ಎಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಆದ್ದರಿಂದ ಕೂಡಲೇ ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ಸು ಪಡೆಯಬೇಕೆಂದು ಹೋರಾಟ ಸಮಿತಿ ಸದಸ್ಯರು ತಹಸೀಲ್ದಾರ್ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಭಾರತದಲ್ಲಿ ಇಂದಿಗೆ ಸುಮಾರು 60 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡದೆ ಲಾಕ್​ಡೌನ್ ಸಂದರ್ಭದಲ್ಲಿ ರೈಲ್ವೆ ಸಂಚಾರಕ್ಕೆ ಅನುಮತಿ ನೀಡಿರುವುದು ಮೂರ್ಖತನದ ಪರಮಾವಧಿ ಎಂದು ಆರೋಪಿಸಿಸಿದರು.

ರೈಲು ಸಂಚಾರಕ್ಕೆ ಅನುಮತಿ ನೀಡಿರುವುದನ್ನು ಹಿಂಪಡೆದು ಜನರ ಹಿತ ಕಾಪಾಡಬೇಕು ಎಂದು ಕಳಸಾ ಬಂಡೂರಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಆಗ್ರಹಿಸಿದರು.

ABOUT THE AUTHOR

...view details