ಹುಬ್ಬಳ್ಳಿ: ಕೇಂದ್ರ ಹಾಗು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಪ್ರತಿಭಟನೆ ನಡೆಸಿದೆ.
ಕೃಷಿ ಕಾಯ್ದೆ ರದ್ದತಿಗೆ ಒತ್ತಾಯಿಸಿ ಕಳಸಾ-ಬಂಡೂರಿ ಹೋರಾಟಗಾರರ ಪ್ರತಿಭಟನೆ - Karnataka Kalasa-Banduri Farmer Struggle Committee
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ರೈತ ವಿರೋಧಿ ತಿದ್ದುಪಡಿಗಳನ್ನು ರದ್ದುಪಡಿಸುವಂತೆ ಕಳಸಾ ಬಂಡೂರಿ ಹೋರಾಟಗಾರರ ಒತ್ತಾಯ
ಕೃಷಿ, ಎಪಿಎಂಸಿ ಮತ್ತು ಅಗತ್ಯ ವಸ್ತುಗಳ ಸಂಗ್ರಹ ತಿದ್ದುಪಡಿ ಕಾಯ್ದೆಗಳು, ಗೋ ಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ವಿದ್ಯುತ್ ಕಾಯ್ದೆಯನ್ನು ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ತಿದ್ದುಪಡಿಗಳು ರೈತ ವಿರೋಧಿಯಾಗಿವೆ. ಇವುಗಳಿಂದ ರೈತರಿಗೆ ಯಾವುದೇ ಅನುಕೂಲವಿಲ್ಲ. ಹೀಗಾಗಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.