ಹುಬ್ಬಳ್ಳಿ:ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪ್ಲಾಸ್ಟಿಕ್ ವ್ಯಾಪಾರಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ನಡುವೆ ದೂರು ಹಾಗೂ ಪ್ರತಿ ದೂರು ದಾಖಲಾಗಿವೆ. ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣದ) ಕಾರ್ಯಕರ್ತರು ಏಳು ಜನರ ವಿರುದ್ದ ಅಟ್ರಾಸಿಟಿ ಕೇಸ್ ದಾಖಲು ಮಾಡಿದ್ದಾರೆ. ಮಾಜಿ ಕಾರ್ಪೋರೆಟರ್ ಸೇರಿದಂತೆ ಏಳು ಜನರ ವಿರುದ್ಧ ಕರವೇ ಕಾರ್ಯಕರ್ತ ಪ್ರವೀಣ ಗಾಯಕವಾಡ ಜಾತಿ ನಿಂದನೆ ದೂರು ದಾಖಲಿಸಿದ್ದಾರೆ.
ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪ:ಕಳೆದ ಕೆಲ ದಿನಗಳ ಹಿಂದೆ ಪ್ಲಾಸ್ಟಿಕ್ ವ್ಯಾಪಾರಿಗಳಿಗೆ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆ ಕರವೇ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರ ವಿರುದ್ದ ದೂರು ದಾಖಲಾಗಿತು. ಸಚಿವರ ಹೆಸರಲ್ಲಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ಕರವೇ ಜಿಲ್ಲಾಧ್ಯಕ್ಷ ವಿರುದ್ದ ದೂರು ದಾಖಲಿಸಲಾಗಿತ್ತು. ಇದೀಗ ಕರವೇ ಕಾರ್ಯಕರ್ತ ಪ್ರವೀಣ ಗಾಯಕವಾಡ ಅವರು ಪ್ಲಾಸ್ಟಿಕ್ ವ್ಯಾಪಾರಿಗಳು ಸೇರಿ ಏಳು ಜನರ ವಿರುದ್ದ ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ ಅನ್ನು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಿದ್ದಾರೆ.
ಪ್ಲಾಸ್ಟಿಕ್ ವ್ಯಾಪಾರಿಗಳಾದ ವಿಜಯ್ ಅಳಗುಂಡಗಿ, ಭರತ್ ಜೈನ್,ಲಲಿತ್ ಜೈನ್, ಭವೇಶ್ ಜೈನ್, ಶಿವಾನಂದ ಮುತ್ತಣ್ಣವರ, ವಿಜಯಕುಮಾರ ಅಪಾಜಿ ಹಾಗೂ ಓರ್ವ ಅಪರಿಚಿತ ಸೇರಿ ಏಳು ಜನರ ವಿರುದ್ದ ದೂರು ದಾಖಲಾಗಿದೆ. ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ SC ST act 504,506,143,147 ಅಡಿ ಜಾತಿ ಹಿಡಿದು ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.