ಧಾರವಾಡ: ಬಾಲಕಿ ಮೇಲೆ ನಡೆಸಿದ ಅತ್ಯಾಚಾರ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಅತ್ಯಾಚಾರಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಕಾಮುಕನನ್ನು ಗಲ್ಲಿಗೆ ಹಾಕುವಂತೆ ಕರವೇ ಆಗ್ರಹ - Dharawad district news
ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
![ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಕಾಮುಕನನ್ನು ಗಲ್ಲಿಗೆ ಹಾಕುವಂತೆ ಕರವೇ ಆಗ್ರಹ karave_protest](https://etvbharatimages.akamaized.net/etvbharat/prod-images/768-512-8375168-709-8375168-1597126739270.jpg)
ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ
ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ
ಬಷೀರ್ ಗಡಾದಾರ ಎಂಬ ಯುವಕ ತಾಲೂಕಿನ ಗ್ರಾಮವೊಂದರಲ್ಲಿ ಪೂಜೆಗೆ ಹೋದಾಗ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದೀಗ ಬಾಲಕಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕುತ್ತಿದ್ದಾನೆ. ಆರೋಪಿ ಬಷೀರ್ ಮೇಲೆ 302 ಸೆಕ್ಷನ್ ಹಾಕಬೇಕು. ಕೂಡಲೇ ಪೊಲೀಸ್ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿ, ಗಲ್ಲು ಶಿಕ್ಷೆ ಆಗುವ ಹಾಗೆ ಮಾಡಬೇಕು ಎಂದು ಆಗ್ರಹಿಸಿದರು.
Last Updated : Aug 11, 2020, 12:28 PM IST