ಕರ್ನಾಟಕ

karnataka

ETV Bharat / state

ಕರ್ನಾಟಕ ಬಂದ್: ಹುಬ್ಬಳ್ಳಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ - hubli latest news

ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ‌ಕೂಗಿ‌ದರು.

Karnataka Band: Protest in Hubli!
Karnataka Band: Protest in Hubli!

By

Published : Feb 13, 2020, 12:51 PM IST

ಹುಬ್ಬಳ್ಳಿ:ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ಸಂಗ್ರಾಮ ಸೇನೆ, ಮಾನವ ಹಕ್ಕುಗಳ ಸಂರಕ್ಷಣಾ ಫೋರಂ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಕರ್ನಾಟಕ ಬಂದ್ ಬೆಂಬಲಿಸಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ‌ಕೂಗಿ‌ದರು.

ಕರ್ನಾಟಕ ಬಂದ್​ ಹಿನ್ನಲೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಸಂಗೊಳ್ಳಿ ರಾಯಣ್ಣ ವೃತ್ತ, ಜನತಾಬಜಾರ್ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರಸ್ಥರ ಬಳಿ ತೆರಳಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್​ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಕೂಡಲೇ ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಿ, ಕನ್ನಡಿಗರಿಗೆ ನ್ಯಾಯ ಒದಗಿಸಿಕೊಡಬೇಕು‌, ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆ ನಂತರ ತಹಶಿಲ್ದಾರ್​ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details