ಹುಬ್ಬಳ್ಳಿ :ಹುಮನಾಬಾದ್ನಲ್ಲಿ ಕರ್ತವ್ಯನಿರತ ತಹಶೀಲ್ದಾರ್ ಪ್ರದೀಪ್ ಹಿರೇಮಠ ಅವರ ಮೇಲೆ ನಡೆದ ಅಮಾನುಷ ಹಲ್ಲೆಯನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ತಹಶೀಲ್ದಾರ್ ಪ್ರದೀಪ್ ಹಿರೇಮಠ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
ಬೀದರ್ನ ಹುಮನಾಬಾದ್ನಲ್ಲಿ ಶುಕ್ರವಾರ ಮನವಿ ಸ್ವೀಕರಿಸಲು ಬರಲಿಲ್ಲ ಎಂದು ಆಕ್ರೋಶಗೊಂಡ ಪ್ರತಿಭಟನಾನಿರತ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು, ತಹಶೀಲ್ದಾರ್ ಕಚೇರಿಗೆ ನುಗ್ಗಿ ಕುರ್ಚಿಗಳನ್ನು ಧ್ವಂಸಗೊಳಿಸಿದ್ದಲ್ಲದೇ, ತಹಶೀಲ್ದಾರ್ ಪ್ರದೀಪ್ ಹಿರೇಮಠ ಮೇಲೆ ಹಲ್ಲೆ ನಡೆಸಿರೋದು ಖಂಡನೀಯವಾಗಿದೆ.
ಸಾರ್ವಜನಿಕರು ತಾಳ್ಮೆ ಕಳೆದುಕೊಂದು ಅಧಿಕಾರಿಗಳ ಮೇಲೆ ಹಲ್ಲೆ ಮಾಡುವಂತಹ ಕೃತ್ಯದಿಂದ ಸರ್ಕಾರಿ ಆಫೀಸರ್ಗಳು ಭಯಬೀತರಾಗಿದ್ದಾರೆ. ಹಲವು ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿವೆ. ರಾಜ್ಯದಲ್ಲಿ ಕಠಿಣ ಕಾನೂನು ಕ್ರಮ ಜಾರಿಯಲ್ಲಿರದ ಹಿನ್ನೆಲೆ ಇಂತಹ ಘಟನೆಗಳಿಗೆ ಕಾರಣವಾಗಿದೆ.