ಕರ್ನಾಟಕ

karnataka

ETV Bharat / state

ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಅಹೋರಾತ್ರಿ ಧರಣಿ - ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿದ ಕರ್ನಾಟಕ ಕ್ಷತ್ರಿಯ ಒಕ್ಕೂಟ

ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯ ತಹಶೀಲ್ದಾರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು.

ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಅಹೋರಾತ್ರಿ ಧರಣಿ

By

Published : Nov 20, 2019, 1:33 PM IST

ಧಾರವಾಡ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಕರ್ನಾಟಕ ಕ್ಷತ್ರಿಯ ಒಕ್ಕೂಟದ ವತಿಯಿಂದ ಹುಬ್ಬಳ್ಳಿಯ ತಹಶೀಲ್ದಾರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಕ್ಷತ್ರಿಯ ಸಮಾಜದ ರಾಜ್ಯಾಧ್ಯಕ್ಷ ಉದಯ್ ಸಿಂಗ್, ಕ್ಷತ್ರಿಯ ಸಮಾಜವು ಸ್ವಾತಂತ್ರ್ಯ ಪೂರ್ವದಿಂದಲೂ ಸಮಾಜದ ರಕ್ಷಣೆಯ ಜೊತೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ಕ್ಷತ್ರಿಯ ಸಮಾಜವನ್ನು ರಾಜಕೀಯ ಪಕ್ಷಗಳು ಕಡೆಗಣಿಸುತ್ತಿದ್ದು, ಕೇವಲ ಮತ ಬ್ಯಾಂಕ್​ ಆಗಿ ಮಾತ್ರ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದರು.

ಕರ್ನಾಟಕ ಕ್ಷತ್ರಿಯ ಒಕ್ಕೂಟದಿಂದ ಅಹೋರಾತ್ರಿ ಧರಣಿ

ಮೂಲಭೂತ ಸೌಕರ್ಯಗಳಿಂದ ಕ್ಷತ್ರಿಯ ಸಮಾಜವು ವಂಚಿತವಾಗಿದ್ದು, ಸಮಾಜದ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಸಚಿವ ಸಂಪುಟದಲ್ಲಿ ಕ್ಷತ್ರಿಯರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದು, ಕನಿಷ್ಠ 4 ಜನ ಕ್ಷತ್ರಿಯ ನಾಯಕರನ್ನು ಸಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸುವುದು ಹಾಗೂ ಕ್ಷತ್ರಿಯ ಮರಾಠ ಸಮಾಜವನ್ನು ಪ್ರವರ್ಗ 2ಎಗೆ ಸೇರ್ಪಡೆ ಮಾಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು.

For All Latest Updates

TAGGED:

ABOUT THE AUTHOR

...view details