ಧಾರವಾಡ : ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗೆ ಬಾರದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಉಪವಾಸ ಸತ್ಯಾಗ್ರಹ ನಡೆಸಿತು.
ನೆರೆ ಪರಿಹಾರ ನೀಡದ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ - ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ
ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗೆ ಬಾರದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಉಪವಾಸ ಸತ್ಯಾಗ್ರಹ ನಡೆಸಿತು.
![ನೆರೆ ಪರಿಹಾರ ನೀಡದ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ](https://etvbharatimages.akamaized.net/etvbharat/prod-images/768-512-4623480-thumbnail-3x2-sada.jpg)
Karnataka rakshana vedike
ಸರ್ಕಾರದ ವಿರುದ್ಧ ಸತ್ಯಾಗ್ರಹ ನಡೆಸಿದ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ
ನಗರದಲ್ಲಿ ನಾರಾಯಣ ಬಣದ ಕಾರ್ಯಕರ್ತರು ಸತ್ಯಾಗ್ರಹ ನಡೆಸಿದ್ದು, ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಶೀಘ್ರದಲ್ಲೇ ಪರಿಹಾರ ಘೋಷಣೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಮ್ಮ ಉತ್ತರ ಕರ್ನಾಟಕಕ್ಕೆ ಪರಿಹಾರ ಕೊಡುವಲ್ಲಿ ವಿಫಲವಾಗಿವೆ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಲ ಅಧಿವೇಶನ ಬೆಳಗಾವಿಯಲ್ಲಿ ನಡೆಸಬೇಕೆಂದು ಆಗ್ರಹಿಸಿದರು.