ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆಗಳು ಗುಂಡಿ ಬಿದ್ದಿದ್ದು ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಶಿವಸೇನಾ ವತಿಯಿಂದ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಹು-ಧಾ ರಸ್ತೆ ಸಮಸ್ಯೆ ಬಗೆಹರಿಸುವಂತೆ ಮನವಿ - Smart city project
ಚರಂಡಿ ಹಾಗೂ ರಸ್ತೆ ಸಮಸ್ಯೆಗಳಿಂದ ಹು-ಧಾ ಜನರು ಸಂಕಷ್ಟ ಅನುಭವಿಸುವಂತಾಗಿದ್ದು, ಹತ್ತು ದಿನಗಳ ಒಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಶಿವಸೇನಾ ಮನವಿ ಪತ್ರ ಸಲ್ಲಿಸಿದೆ.

Shiva sena
ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿದ್ದರು ಕೂಡ ಹು-ಧಾ ಮಹಾನಗರ ಮಾತ್ರ ಯಾವುದೇ ಕಾರಣಕ್ಕೂ ಸಮಸ್ಯೆಗಳಿಂದ ಮುಕ್ತವಾಗುತ್ತಿಲ್ಲ. ಅಲ್ಲದೇ ಸುಮಾರು ವರ್ಷಗಳಿಂದ ಚರಂಡಿ ಹಾಗೂ ರಸ್ತೆ ಸಮಸ್ಯೆಗಳಿಂದ ಜನರು ಸಂಕಷ್ಟ ಅನುಭವಿಸುವಂತಾಗಿದ್ದು, ಹತ್ತು ದಿನಗಳ ಒಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಇಲ್ಲವಾದರೆ ಪಾಲಿಕೆಗೆ ಮುತ್ತಿಗೆ ಹಾಕಲಾಗವುದು ಎಂದು ಶಿವಸೇನಾ ಕಾರ್ಯಕರ್ತರು ಎಚ್ಚರಿಕೆ ನೀಡಿದರು.