ಧಾರವಾಡ:ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಕಾರಣ ಕರ್ನಾಟಕ ವಿವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸೋಮವಾರದಂದು ನಡೆಯಬೇಕಿದ್ದ ಸ್ನಾತಕ ಮತ್ತು ಸ್ನಾತಕೋತ್ತರ, ವಿವಿಧ ಸೆಮಿಸ್ಟರ್ ವಿಷಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.