ಧಾರವಾಡ: ಕೆಸಿಸಿ ಬ್ಯಾಂಕ್ ವತಿಯಿಂದ ಅಧ್ಯಕ್ಷ ಬಾಪುಗೌಡ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿಗಳ ಚೆಕ್‌ಅನ್ನು ನೀಡಲಾಯಿತು.
ಕೊರೊನಾ ವೈರಸ್ ಹರಡುವಿಕೆಯಿಂದ ಜನಜೀವನ ಅಸ್ತವ್ಯವಸ್ತಗೊಂಡಿದೆ. ಈ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸರ್ಕಾರದ ಚಾಣಾಕ್ಷತನದ ಕಾರ್ಯವೈಖರಿಯಿಂದ ಪರಿಸ್ಥಿತಿ ಗಂಭೀರ ಹಂತ ತಲುಪಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ. ಸರ್ಕಾರಕ್ಕೆ ಈ ಸಂದರ್ಭದಲ್ಲಿ ಆರ್ಥಿಕ ನೆರವು ನೀಡುವ ಸಲುವಾಗಿ ಬ್ಯಾಂಕ್ ಮತ್ತು ಬ್ಯಾಂಕಿನ ಸಿಬ್ಬಂದಿ ಸಂಗ್ರಹಿಸಿದ 10 ಲಕ್ಷ ರೂ.ಗಳನ್ನು ನೀಡಲು ಸಂತಸವಾಗುತ್ತಿದೆ ಎಂದು ಬಾಪುಗೌಡ ಪಾಟೀಲ್ ಹೇಳಿದರು.