ಹುಬ್ಬಳ್ಳಿ: ಅವಳಿ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿದಿನ 200ರ ಗಡಿ ದಾಟುತ್ತಿದ್ದು, ಇದರ ಮಧ್ಯೆ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಹು-ಧಾ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಶಂಕಿತರ ಗಂಟಲು ದ್ರವ ಸಂಗ್ರಹವನ್ನು ಸ್ಥಗಿತಗೊಳಿಸಲಾಗಿದೆ.
ಕಿಮ್ಸ್, ಚಿಟಗುಪ್ಪಿ ಆಸ್ಪತ್ರೆಯಲ್ಲಿ ಆರು ದಿನ ಸ್ವ್ಯಾಬ್ ಸಂಗ್ರಹಣೆ ಬಂದ್
ಹುಬ್ಬಳ್ಳಿಯ ಕಿಮ್ಸ್ ಹಾಗೂ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಆರು ದಿನಗಳ ಕಾಲ ಶಂಕಿತರ ಗಂಟಲು ದ್ರವ ಸಂಗ್ರಹ ಹಾಗೂ ಪರೀಕ್ಷೆಯನ್ನು ಸ್ಥಗಿತಗೊಳಿಸಲಾಗಿದೆ.
ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ
ಹು-ಧಾ ಮಹಾನಗರದಲ್ಲಿ ಬಹುತೇಕ ಕಡೆಗಳಲ್ಲಿ ಪರೀಕ್ಷೆ ಮಾಡಲಾಗುತ್ತಿತ್ತು. ಆದರೆ ಕಿಮ್ಸ್ ಹಾಗೂ ಚಿಟಗುಪ್ಪಿ ಆಸ್ಪತ್ರೆಗೆ ಹೆಚ್ಚು ಶಂಕಿತರು ತಪಾಸಣೆಗೆ ಬರುತ್ತಿದ್ದರು. ಇದೀಗ ಸ್ಯಾನಿಟೈಸ್ ಮಾಡುತ್ತಿರುವ ಕಾರಣ ಆರು ದಿನಗಳ ಕಾಲ ಪರೀಕ್ಷೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸಾರ್ವಜನಿಕರು ಪರದಾಡುವಂತಾಗಿದೆ.
ಇನ್ನೂ ಕಿಮ್ಸ್ ಆಸ್ಪತ್ರೆಯಲ್ಲಿ ಸುಮಾರು ನಾಲ್ಕು ನೂರು ಜನರ ಹಾಗೂ ಚಿಟಗುಪ್ಪಿ ಆಸ್ಪತ್ರೆಯಲ್ಲಿ 150 ಕ್ಕೂ ಹೆಚ್ಚು ಜನರ ಗಂಟಲು ದ್ರವವನ್ನು ಸಂಗ್ರಹಿಸಲಾಗುತ್ತಿತ್ತು.