ಹುಬ್ಬಳ್ಳಿ: 7ನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕಿಮ್ಸ್ ವೈದ್ಯರು ಆಸ್ಪತ್ರೆಯ ಒಪಿಡಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
7ನೇ ವೇತನ ಆಯೋಗ ಜಾರಿಗೊಳಿಸುವಂತೆ ಆಗ್ರಹಿಸಿ ಕಿಮ್ಸ್ ವೈದ್ಯರಿಂದ ಪ್ರತಿಭಟನೆ
7ನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕಿಮ್ಸ್ ವೈದ್ಯರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿರುವ ವೈದ್ಯರು, ರಾಜ್ಯದ 17 ವೈದ್ಯಕೀಯ ಕಾಲೇಜುಗಳಿಗೆ ಈಗಾಗಲೇ 7ನೇ ವೇತನ ಆಯೋಗ ಜಾರಿ ಮಾಡಲಾಗಿದೆ. ಆದರೆ ಇದುವರೆಗೂ ಕಿಮ್ಸ್ ವೈದ್ಯಕೀಯ ಕಾಲೇಜಿಗೆ ಜಾರಿ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 300ಕ್ಕೂ ಅಧಿಕ ಸಂಖ್ಯೆಯಲ್ಲಿ ಕಿಮ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಕಪ್ಪು ಪಟ್ಟಿ ಧರಿಸಿಯೇ ಕರ್ತವ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಕ್ಕೆ ಹಾಗೂ ಕಿಮ್ಸ್ ಆಡಳಿತ ಮಂಡಳಿಗೆ ಒಂದು ವಾರದ ಗಡುವು ನೀಡಿದ್ದು, ಕೂಡಲೇ ಕಿಮ್ಸ್ ವೈದ್ಯಕೀಯ ಕಾಲೇಜಿಗೂ 7ನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ಇಲ್ಲವಾದಲ್ಲಿ ಮುಂದಿನ ಸೋಮವಾರದಿಂದ ಕರ್ತವ್ಯ ಸ್ಥಗಿತಗೊಳಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.