ಹುಬ್ಬಳ್ಳಿ:ಉತ್ತರ ಕರ್ನಾಟಕ ಜನರ ಸಂಜೀವಿನಿಯಾಗಿರುವ ಕಿಮ್ಸ್ ಆಸ್ಪತ್ರೆ ಕೊರೊನಾ ಸೋಂಕಿತರಿಂದ ತುಂಬಿ ಹೋಗಿದ್ದು, ಹೊಸದಾಗಿ ಸೋಂಕು ತಗುಲಿದ ಜನರು ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಿದ್ದಾರೆ.
ಕಿಮ್ಸ್ ಕೋವಿಡ್ ವಾರ್ಡ್ ಫುಲ್: ಹೊಸ ಸೋಂಕಿತರು ಖಾಸಗಿ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಕೊರೊನಾ ಸೋಂಕಿತರಿಂದ ತುಂಬಿ ಹೋಗಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ಸೋಂಕು ಪತ್ತೆಯಾದವರು ಖಾಸಗಿ ಆಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ.
ಕಿಮ್ಸ್ ಕೋವಿಡ್ ವಾರ್ಡ್ ಫುಲ್
ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಪರಿಣಾಮ ಕಿಮ್ಸ್ ಆಸ್ಪತ್ರೆ ಫುಲ್ ಆಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪ್ರಾರಂಭಗೊಳ್ಳಲಿದೆ. ಈಗಾಗಲೇ ಸರ್ಕಾರ 22 ಖಾಸಗಿ ಆಸ್ಪತ್ರೆಗಳನ್ನು ಕೋವಿಡ್ ಚಿಕಿತ್ಸೆಗೆ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದೆ.
ಹೊಸದಾಗಿ ಸೋಂಕು ದೃಢ ಪಟ್ಟಿರುವವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಹಾಗೂ ಐಸಿಯು ಅವಶ್ಯಕತೆಯಿದ್ದ ರೋಗಿಗಳಿಗೆ ಮಾತ್ರ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.